Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳದಲ್ಲಿ ಮುನಿಯಾಲು ಉದಯ ಶೆಟ್ಟಿಗೆ...

ಕಾರ್ಕಳದಲ್ಲಿ ಮುನಿಯಾಲು ಉದಯ ಶೆಟ್ಟಿಗೆ ಕಾಂಗ್ರೆಸ್ ಟಿಕೇಟ್

15 April 2023 10:44 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾರ್ಕಳದಲ್ಲಿ ಮುನಿಯಾಲು ಉದಯ ಶೆಟ್ಟಿಗೆ ಕಾಂಗ್ರೆಸ್ ಟಿಕೇಟ್

ಉಡುಪಿ: ನಿರೀಕ್ಷೆಯಂತೆ ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಮಾಜಿ  ಉಪಾಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಹೊಸದಿಲ್ಲಿಯಲ್ಲಿ ಎಐಸಿಸಿ ಇಂದು ಬಿಡುಗಡೆಗೊಳಿಸಿದ ಮೂರನೇ ಪಟ್ಟಿಯಲ್ಲಿ ಕಾರ್ಕಳದಿಂದ ಉದಯ ಶೆಟ್ಟಿ ಸ್ಥಾನ ಪಡೆದಿದ್ದಾರೆ. ಸಾಮಾಜಿಕ ಕಾರ್ಯಕರ್ತರೂ, ಪಿಡಬ್ಲ್ಯುಡಿ ಕ್ಲಾಸ್‌1 ಗುತ್ತಿಗೆದಾರರೂ ಆಗಿರುವ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಆಯ್ಕೆ ಖಚಿತವಾಗಿದ್ದರೂ, ರಾಜಕೀಯ ಕಾರಣಗಳಿಗಾಗಿ ಮೊದಲೆರಡು ಪಟ್ಟಿಯಲ್ಲಿ ಅವರ ಹೆಸರು ಸ್ಥಾನ ಪಡೆದಿರಲಿಲ್ಲ.

33 ವರ್ಷ ಪ್ರಾಯದ (ಜನನ 1990 ಅ.24) ಮುನಿಯಾಲಿನ ಉದಯಕುಮಾರ್ ಶೆಟ್ಟಿ ಅವರು 2018ರಲ್ಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗುವುದು ಕೊನೆಯ ಕ್ಷಣದಲ್ಲಿ ತಪ್ಪಿತ್ತು. ಆಗ ಗೋಪಾಲ ಭಂಡಾರಿ ಅವರನ್ನೇ ಉಳಿಸಿಕೊಳ್ಳಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದರು.

ಈ ಬಾರಿಯೂ ಕಾರ್ಕಳದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಅರ್ಜಿ ಸಲ್ಲಿಸದಿದ್ದ ಉದಯ ಶೆಟ್ಟಿ ಅವರ ಹೆಸರನ್ನು ವೀರಪ್ಪ ಮೊಯ್ಲಿ ಅವರು ಅದೇ ಕಾರಣಕ್ಕಾಗಿ ವಿರೋಧಿಸಿದ್ದರು ಎಂದು ತಿಳಿದುಬಂದಿದೆ. ಕಾರ್ಕಳದಿಂದ ಸ್ಪರ್ಧಿಸಲು ಹೆಬ್ರಿ ಬ್ಲಾಕ್ ಅಧ್ಯಕ್ಷ ಮಂಜುನಾಥ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ ಹಾಗೂ ಹಿರಿಯ ಸದಸ್ಯ ಡಿ.ಆರ್.ರಾಜು ಅರ್ಜಿ ಸಲ್ಲಿಸಿದ್ದು ಅವರಲ್ಲೊಬ್ಬರಿಗೆ ಟಿಕೆಟ್ ನೀಡಿ ಎಂದು ಮೊಯ್ಲಿ ಒತ್ತಾಯಿಸಿದ್ದರೆಂದು ತಿಳಿದುಬಂದಿದೆ.

ಅಲ್ಲದೇ ಕಳೆದ ವರ್ಷ ಬಿಜೆಪಿ ಸರಕಾರದ ಮೇಲೆ ಶೇ.40 ಕಮಿಷನ್ ಪಡೆಯುವ ಗುರುತರ ಆರೋಪ ಕೇಳಿಬಂದಾಗ ಉದಯಕುಮಾರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿ ನಡೆಸಿ ‘ನಾವು ಗುತ್ತಿಗೆದಾರರು ಯಾರಿಗೂ ಕಮಿಷನ್ ನೀಡುತ್ತಿಲ್ಲ.’ ಎಂದು ಹೇಳಿರುವುದು ಕೂಡಾ ಅವರ ವಿರೋಧಿಗಳಿಗೆ ಅಸ್ತ್ರವಾಗಿ ಒದಗಿಬಂದಿತ್ತು ಎನ್ನಲಾಗಿದೆ.

ಆದರೆ ಸಾಮಾಜಿಕ ಕಾರ್ಯಕರ್ತರಾಗಿ ಹೆಬ್ರಿ, ಕಾರ್ಕಳದಲ್ಲಿ ಜನಪ್ರಿಯ ರಾಗಿರುವ ಹಾಗೂ ಕೊಡುಗೈ ದಾನಿಯೂ ಆಗಿರುವ ಯುವ ಗುತ್ತಿಗೆದಾರ  ಉದಯಕುಮಾರ್ ಶೆಟ್ಟಿ ಅವರ ಬಗ್ಗೆ ವರಿಷ್ಠರು ಒಲವು ತೋರಿದ್ದು, ಕಳೆದ ಬಾರಿ ಅವಕಾಶ ವಂಚಿತ ಅವರಿಗೆ ಈ ಬಾರಿ ಟಿಕೇಟ್ ನೀಡಲು ನಿರ್ಧರಿಸಿದರು ಎಂದು ಹೇಳಲಾಗಿದೆ.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X