ಎ.17ರಂದು ಉಡುಪಿಯಲ್ಲಿ ‘ಹಾಡು ಹರಟೆ’ ಕಾರ್ಯಕ್ರಮ
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಆಶ್ರಯದಲ್ಲಿ ಎ.17ರ ಸೋಮವಾರ ಸಂಜೆ 5.15ರಿಂದ ‘ಹಾಡು ಹರಟೆ’ ಕಾರ್ಯಕ್ರಮ ಉಡುಪಿ ಬುಡ್ನಾರಿನ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ನಡೆಯಲಿದೆ.
ಸಾಹಿತ್ಯ ದಿಗ್ಗಜರಾದ ಡುಂಡಿರಾಜ್ ಎಚ್., ಗುರುರಾಜ್ ಮಾರ್ಪಳ್ಳಿ ಹಾಗೂ ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಹೆಬ್ರಿಯ ಡಾ.ಭಾರ್ಗವಿ ಆರ್. ಐತಾಳ್ ಉದ್ಘಾಟಿಸ ಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿರು ವರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story