ಮುಂದಿಟ್ಟ ಹೆಜ್ಜೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಎ.16: ಬಿಜೆಪಿ ಟಿಕೆಟ್ ವಿಚಾರವಾಗಿ ಕೊನೆಯ ವಿಸ್ಮಯವೇನು ನಡೆಯದು. ಹಾಗೇನಾದರೂ ನಡೆದರೂ ಮುಂದಿಟ್ಟ ಹೆಜ್ಜೆಯಿಂದ ಮತ್ತೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಇಂದು ಬೆಳಗ್ಗೆ 10:30ರ ಸುಮಾರಿಗೆ ಶಿರಸಿಯಲ್ಲಿ ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು.
ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಸ್ಪೀಕರ್ ಭೇಟಿ ಬಳಿಕ ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ ಎಂದರು.
ಮೋದಿ, ಅಮಿತ್ ಶಾಗೆ ಗ್ರೌಂಡ್ ಲೆವಲ್ ಏನು ನಡೀತಿದೆ ಅನ್ನೋದು ಗೊತ್ತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿಗಳು, ಇಲ್ಲಿನ ನಾಯಕರು ಬಿಜೆಪಿ ಅಧಿಕಾರಕ್ಕೆ ತರುವುದು ಬೇಡ ಅಂತಾ ತೀರ್ಮಾನ ಮಾಡಿದಂತಿದೆ ಎಂದು ಟೀಕಿಸಿದರು.
Next Story





