Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ ಸಂಸದನ ಹತ್ಯೆ ಪ್ರಕರಣ: ಆಂಧ್ರ...

ಮಾಜಿ ಸಂಸದನ ಹತ್ಯೆ ಪ್ರಕರಣ: ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಚಿಕ್ಕಪ್ಪನನ್ನು ಬಂಧಿಸಿದ ಸಿಬಿಐ

16 April 2023 10:16 AM IST
share
ಮಾಜಿ ಸಂಸದನ ಹತ್ಯೆ ಪ್ರಕರಣ:  ಆಂಧ್ರ ಸಿಎಂ ಜಗನ್ ಮೋಹನ್  ರೆಡ್ಡಿ ಚಿಕ್ಕಪ್ಪನನ್ನು ಬಂಧಿಸಿದ ಸಿಬಿಐ

ತಿರುಪತಿ: ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣದಲ್ಲಿ ವೈಎಸ್‌ಆರ್‌ಸಿಪಿ ಕಡಪ ಸಂಸದ ವೈ.ಎಸ್. ಅವಿನಾಶ್ ರೆಡ್ಡಿ ಅವರ ತಂದೆ ಹಾಗೂ  ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ)  ರವಿವಾರ ಬೆಳಗ್ಗೆ ಬಂಧಿಸಿದೆ.

ಭಾಸ್ಕರ್ ರೆಡ್ಡಿ ಬಂಧನವು 48 ಗಂಟೆಗಳಲ್ಲಿ ಸಿಬಿಐ ನಡೆಸಿದ ಎರಡನೇ ಬಂಧನವಾಗಿದೆ.

ಕಡಪ ಸಂಸದ ವೈ.ಎಸ್. ಅವಿನಾಶ್ ರೆಡ್ಡಿ ಅವರ ಆಪ್ತ ಗಜ್ಜಲ ಉದಯ್ ಕುಮಾರ್ ರೆಡ್ಡಿ ಅವರನ್ನು ಸಿಬಿಐ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ರವಿವಾರ ಮುಂಜಾನೆ ಎರಡು ವಾಹನಗಳಲ್ಲಿ ಪುಲಿವೆಂದುಲದಲ್ಲಿರುವ ಭಾಸ್ಕರ್ ರೆಡ್ಡಿ ಅವರ ನಿವಾಸಕ್ಕೆ ಆಗಮಿಸಿದ ಸಿಬಿಐ ಅಧಿಕಾರಿಗಳು ಭಾಸ್ಕರ್ ರೆಡ್ಡಿಯನ್ನು ವಶಕ್ಕೆ ಪಡೆದು ಅವರ ಕುಟುಂಬ ಸದಸ್ಯರಿಗೆ ಬಂಧನದ ಪತ್ರವನ್ನು ಹಸ್ತಾಂತರಿಸಿದರು.

ಭಾಸ್ಕರ್ ರೆಡ್ಡಿಯನ್ನು ಬಿಗಿ ಭದ್ರತೆಯ ನಡುವೆ ಕಡಪಾದಲ್ಲಿರುವ ಕೇಂದ್ರ ಕಾರಾಗೃಹದ ಆವರಣದಲ್ಲಿರುವ ಜೈಲು ಅತಿಥಿಗೃಹಕ್ಕೆ ಸ್ಥಳಾಂತರಿಸಿದ   ಸಿಬಿಐ ಅಧಿಕಾರಿಗಳು ನಂತರ  ಹೈದರಾಬಾದ್‌ಗೆ ಶಿಫ್ಟ್ ಮಾಡಿ  ಅಲ್ಲಿನ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಭಾಸ್ಕರ್ ರೆಡ್ಡಿ ಬಂಧನದ ಸುದ್ದಿ ತಿಳಿದ ಕಡಪಾ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಮತ್ತು ಸಂಸದರ ಅನುಯಾಯಿಗಳು ಭಾಸ್ಕರ್ ರೆಡ್ಡಿ ಅವರ ನಿವಾಸದ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು.

ವೈ.ಎಸ್ .ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣದ ತನಿಖೆಯಲ್ಲಿ ಈಗಾಗಲೇ ಹಲವು ಬಾರಿ ಸಿಬಿಐನಿಂದ ವಿಚಾರಣೆಗೆ ಒಳಗಾದ ವೈಎಸ್ ಭಾಸ್ಕರ್ ರೆಡ್ಡಿ ಬಂಧನ ಮಹತ್ವ ಪಡೆದುಕೊಂಡಿದೆ.

ವಿವೇಕಾನಂದ ರೆಡ್ಡಿ ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಸಹೋದರ ಹಾಗೂ  ಹಾಲಿ ಆಂಧ್ರ  ಸಿಎಂ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರ ಚಿಕ್ಕಪ್ಪ. ರಾಜ್ಯ ವಿಧಾನಸಭಾ ಚುನಾವಣೆಗೆ ವಾರಗಳ ಮೊದಲು ಮಾರ್ಚ್ 15, 2019 ರ ರಾತ್ರಿ ಅವರ ಸೋದರಳಿಯ ಪ್ರತಿನಿಧಿಸುವ ಕ್ಷೇತ್ರವಾದ ಪುಲಿವೆಂದುಲದಲ್ಲಿನ ಅವರ ನಿವಾಸದಲ್ಲಿ ಅವರು ಕೊಲೆಯಾಗಿದ್ದರು.

ಈ ಪ್ರಕರಣವನ್ನು ಆರಂಭದಲ್ಲಿ ರಾಜ್ಯ ಅಪರಾಧ ತನಿಖಾ ವಿಭಾಗದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಿತು. ಆದರೆ ಜುಲೈ 2020 ರಲ್ಲಿ ಸಿಬಿಐಗೆ ಹಸ್ತಾಂತರಿಸಲಾಯಿತು.

share
Next Story
X