ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲಿರುವ ಅಖಂಡ ಶ್ರೀನಿವಾಸಮೂರ್ತಿ?

ಬೆಂಗಳೂರು: ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಹಾಲಿ ಅಖಂಡ ಶ್ರೀನಿವಾಸಮೂರ್ತಿ ತಮ್ಮ ಶಾಸಕ ರಾಜಿನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆಗೆ ಶಾಸಕ ಅಖಂಡ ಅವರ ಧೋರಣೆಯೇ ಕಾರಣ ಎಂದು ಅಲ್ಪಸಂಖ್ಯಾತ ಮುಖಂಡರು ಆರೋಪಿಸಿದ್ದು, ಅವರಿಗೆ ಟಿಕೆಟ್ ನೀಡದಂತೆ ಕಾಂಗ್ರೆಸ್‌ಗೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪುಲಕೇಶಿನಗರದ ಟಿಕೆಟ್ ಘೋಷಣೆ ಗೊಂದಲದ ಗೂಡಾಗಿದೆ. ಈ ಬೆಳವಣಿಗೆಯಿಂದ ಬೇಸತ್ತಿರುವ ಅಖಂಡ ಮೂರ್ತಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
Next Story





