ಕಾಂಗ್ರೆಸ್ ನಿಂದ 'ಜೈ ಭಾರತ ಸಮಾವೇಶ': ಕೋಲಾರಕ್ಕೆ ಆಗಮಿಸಿದ ರಾಹುಲ್ ಗಾಂಧಿ

ಕೋಲಾರ, ಎ.16: ಕೋಲಾರದಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ 'ಜೈಭಾರತ್' ಸಮಾವೇಶದಲ್ಲಿ ಪಾಲ್ಗೊಳ್ಳಲು ಪಕ್ಷದ ಮುಖಂಡ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರರ ನಾಯಕರು ಸ್ವಾಗತಿಸಿದರು.
ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಕೋಲಾರಕ್ಕೆ ತೆರಳಿದರು.
Next Story





