Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಗದೀಶ್ ಶೆಟ್ಟರ್ ರನ್ನು ನಾಡಿನ ಜನತೆ...

ಜಗದೀಶ್ ಶೆಟ್ಟರ್ ರನ್ನು ನಾಡಿನ ಜನತೆ ಕ್ಷಮಿಸುವುದಿಲ್ಲ: ಯಡಿಯೂರಪ್ಪ

'ಸವದಿಯಿಂದ ವಿಶ್ವಾಸ ದ್ರೋಹ'

16 April 2023 2:27 PM IST
share
ಜಗದೀಶ್ ಶೆಟ್ಟರ್ ರನ್ನು ನಾಡಿನ ಜನತೆ ಕ್ಷಮಿಸುವುದಿಲ್ಲ: ಯಡಿಯೂರಪ್ಪ
'ಸವದಿಯಿಂದ ವಿಶ್ವಾಸ ದ್ರೋಹ'

ಬೆಂಗಳೂರು, ಎ.16: ಬಿಜೆಪಿ ತೊರೆದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವುದು ಅಕ್ಷಮ್ಯ ಅಪರಾಧ, ಪಕ್ಷಕ್ಕೆ ಮಾಡಿದ ದ್ರೋಹ. ನಾಡಿನ ಜನತೆ ಅವರನ್ನು ಕ್ಷಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಜನಸಂಘದ ಕಾಲದಿಂದ ಬಿಜೆಪಿ ಕುಟುಂಬದಲ್ಲಿದ್ದವರು. ಪಕ್ಷದ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕ, ಸಚಿವ ಮತ್ತು ಮುಖ್ಯಮಂತ್ರಿ ಸ್ಥಾನಗಳನ್ನು ಬಿಜೆಪಿ ನೀಡಿತ್ತು. ಬಿ.ಬಿ.ಶಿವಪ್ಪರನ್ನು ಎದುರು ಹಾಕಿಕೊಂಡು ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲಾಗಿತ್ತು. ತಾವು ಮತ್ತು ಅನಂತಕುಮಾರ್ ಅವರ ಪರವಾಗಿ ನಿಂತು ಅವರನ್ನು ಮುಖ್ಯಮಂತ್ರಿಯನ್ನಾಗಿಯೂ ಮಾಡಿದ್ದೆವು ಎಂದು ವಿವರಿಸಿದರು.

 ಸ್ಥಾನ ಸಿಗದಿದ್ದರೂ ದೇಶಕ್ಕಾಗಿ ಶ್ರಮಿಸಬೇಕಿದೆ. ಶೆಟ್ಟರ್ ಅವರನ್ನು ಗುರುತಿಸಿದ್ದು ಬಿಜೆಪಿ. ವ್ಯಕ್ತಿ ಎಷ್ಟೇ ದೊಡ್ಡವನಾದರೂ ಪಕ್ಷದ ಬೆಂಬಲವಿಲ್ಲದೆ ಎತ್ತರಕ್ಕೇರಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿ ಅಲಂಕರಿಸಲು ಸಾಧ್ಯವಿಲ್ಲ ಎಂದರು.

ಧಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಅವರ ಮನೆಗೆ ಭೇಟಿ ನೀಡಿ ಅವರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಕೇಂದ್ರದಲ್ಲಿ ಸಚಿವರಾಗಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ, ಹಠ ಮಾಡಿ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವುದು ಅಕ್ಷಮ್ಯ ಅಪರಾಧ. ನಾಡಿನ ಜನತೆ ಅವರನ್ನು ಕ್ಷಮಿಸುವುದಿಲ್ಲ. ಇದು ಪಕ್ಷಕ್ಕೆ ಮಾಡಿರುವ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸವದಿಯಿಂದ ವಿಶ್ವಾಸ ದ್ರೋಹ

ಲಕ್ಷ್ಮಣ ಸವದಿ ಶಾಸಕರು, ಸಚಿವರಾಗಿದ್ದರು. ಸೋತಮೇಲೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಕೋರ್ ಕಮಿಟಿಯಲ್ಲಿ ಸ್ಥಾನವನ್ನೂ ನೀಡಲಾಯಿತು. ಅವರ ವಿಧಾನ ಪರಿಷತ್ ಸದಸ್ಯ ಅವಧಿ ಇನ್ನೂ 5 ವರ್ಷ ಇದ್ದರೂ ಪಕ್ಷವನ್ನು ತೊರೆದಿದ್ದಾರೆ. ಪಕ್ಷದಲ್ಲಿದ್ದಿದ್ದರೆ ಮುಂದೆಯೂ ಅವರನ್ನು ಸಚಿವರನ್ನಾಗಿ ಮಾಡುತ್ತಿದ್ದೆವು. ಬಿಜೆಪಿ ಅವರಿಗೆ ಅನ್ಯಾಯ ಮಾಡಿಲ್ಲ. ಬಿಜೆಪಿ ಅವರನ್ನು ಗುರುತಿಸಿದೆ. ಕಾಂಗ್ರೆಸ್ ಹೋಗುವ ಅವರ ಪ್ರಯತ್ನ ಜನತೆಗೆ, ಪಕ್ಷಕ್ಕೆ, ನಂಬಿಕೆ-ವಿಶ್ವಾಸಕ್ಕೆ ಮಾಡಿದ ದ್ರೋಹ ಎಂದು ಯಡಿಯೂರಪ್ಪ ತಿಳಿಸಿದರು.

 ಅವರ ನಿರ್ಧಾರವನ್ನು ಜನತೆ ಕ್ಷಮಿಸುವುದಿಲ್ಲ. ಈ ಬೆಳವಣಿಗೆಗಳಿಂದ ಕಾರ್ಯಕರ್ತರು ವಿಚಲಿತರಾಗುವ ಅಗತ್ಯವಿಲ್ಲ. ಯಾವುದೇ ಸಮಸ್ಯೆಯೂ ಆಗುವುದಿಲ್ಲ. ಯಾವುದೇ ಅಭ್ಯರ್ಥಿ ಇದ್ದರೂ ಕಾರ್ಯಕರ್ತರು ಹಗಲಿರುಳು ಕೆಲಸ ಮಾಡಬೇಕು. ತಾವು ಆ ಭಾಗದಲ್ಲಿ ಪ್ರವಾಸ ಮಾಡಿ ಜನರಿಗೆ ವಾಸ್ತವ ಸಂಗತಿ ತಿಳಿಸುವುದಾಗಿ ಎಂದು ಹೇಳಿದರು.

ತಮಗೆ, ಶೆಟ್ಟರ್ ಅವರಿಗೆ, ಈಶ್ವರಪ್ಪ ಅವರಿಗೆ ಸೇರಿದಂತೆ ಎಲ್ಲರಿಗೂ ಪಕ್ಷ ಸ್ಥಾನಮಾನ ಅವಕಾಶ ನೀಡಿದೆ. ತಮ್ಮಂತ ಸಾಮಾನ್ಯ ಕಾರ್ಯಕರ್ತರು  ರಾಜ್ಯದ ಮೂಲೆ ಮೂಲೆಯಲ್ಲಿ ವಿಶ್ವಾಸ ಗಳಿಸಲು ಬಿಜೆಪಿ ಕಾರಣ ಎಂಬುದನ್ನು ಎಂದಿಗೂ ಮರೆಯುವುದಿಲ್ಲ. ಸ್ವಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದೇನೆ. ಈಶ್ವರಪ್ಪ, ಅಂಗಾರ, ರಘುಪತಿ ಭಟ್ ಪಕ್ಷದ ತೀರ್ಮಾನವನ್ನು ಗೌರವಿಸಿದ್ದು, ಅವರನ್ನು ಅಭಿನಂದಿಸುತ್ತೇನೆ. ಶೆಟ್ಟರ್ ಮತ್ತು ಸವದಿ ನಾಲ್ಕೈದು ದಿನಗಳಲ್ಲಿ ತಮ್ಮ ತಪ್ಪಿನ ಅರಿವಾಗಿ ಪಕ್ಷಕ್ಕೆ ಬರುವುದಾದರೆ ವಾಪಸ್ ಸೇರಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿಕರ್ನಾಟಕದ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲು, ಕೇಂದ್ರ ಸಚಿವೆ ಮತ್ತು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

share
Next Story
X