ಎ.20ರಂದು ಯಶ್ಪಾಲ್ ಸುವರ್ಣ, ಗಂಟಿಹೊಳೆ ನಾಮಪತ್ರ ಸಲ್ಲಿಕೆ

ಬೈಂದೂರು, ಎ.16: ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಎ.20ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಯಶ್ಪಾಲ್ ಸುವರ್ಣ ಬೆಳಗ್ಗೆ 10ಗಂಟೆಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಯಿಂದ ಬನ್ನಂಜೆಯಲ್ಲಿರುವ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿರುವರು. ಅದೇ ರೀತಿ ಗಂಟಿಹೊಳೆ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಬಳಿಕ ಗಣ್ಯರೊಂದಿಗೆ ಬೈಂದೂರು ತಾಲೂಕು ಕಚೇರಿಗೆ ಆಗಮಿಸಿ ಬೆಳಗ್ಗೆ 10.30ಕ್ಕೆ ನಾಮಪತ್ರ ಸಲ್ಲಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story