Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ: ಹೆಬ್ರಿ...

ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ: ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಪೂಜಾರಿ ರಾಜೀನಾಮೆ

16 April 2023 7:40 PM IST
share
ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ: ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಪೂಜಾರಿ ರಾಜೀನಾಮೆ

ಉಡುಪಿ, ಎ.16: ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಬಗ್ಗೆ ಅಸಮಾಧಾನಗೊಂಡಿರುವ ಕಾರ್ಕಳ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಂಜುನಾಥ ಪೂಜಾರಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಈ ನಿರ್ಧಾರ ವನ್ನು ಪ್ರಕಟಿಸಿದರು. ನಾನು ಕಾಂಗ್ರೆಸ್‌ನ ತತ್ವ ಸಿದ್ಧಾಂತದಲ್ಲಿ ನಡೆಯುವ ನಿಷ್ಠಾವಂತ ಕಾರ್ಯಕರ್ತ. ಹಾಗಾಗಿ ನಾನು ಕಾಂಗ್ರೆಸ್ ಸದಸ್ಯನಾಗಿ ಇರುತ್ತೇನೆ. ಇನ್ನು ನನಗೆ ಯಾವುದೇ ಹುದ್ದೆ ಬೇಡ. ಯಾವುದೇ ಪ್ರಚಾರಕ್ಕೆ ಹೋಗುವುದಿಲ್ಲ. ಪಕ್ಷ ವಿರೋಧಿ ಚಟುವಟಿಕೆ ಮಾಡಲ್ಲ. ಬೇರೆ ಪಕ್ಷಕ್ಕೂ ಸೇರುವುದಿಲ್ಲ. ರಾಹುಲ್ ಗಾಂಧಿಯೇ ನನ್ನ ನಾಯಕ ಎಂದರು.

ನಾವು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಡಿ.ಕೆ.ಶಿವಕುಮಾರ್ ಇದೀಗ ಆಡಿದ್ದೇ ಬೇರೆ. ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಿರುವವರನ್ನು  ಕಡೆಗಣಿಸಿದ್ದಾರೆ. ಬಿಜೆಪಿಯವರಿಗೆ ದೇಶವನ್ನು ಮಾರಾಟ ಮಾಡುತ್ತಿದ್ದಾರೆಂದು ಹೇಳುವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷವನ್ನೇ ಮಾರಾಟ ಮಾಡುತ್ತಿದ್ದಾರೆ. ಜಿಲ್ಲೆಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ 2 ಕೋಟಿ ರೂ. ಹಣಕ್ಕಾಗಿ ಟಿಕೆಟ್ ಮಾರಾಟ ಮಾಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನು  ಗೆಲ್ಲುವುದಿಲ್ಲ ಎಂದು ಅವರು ಆರೋಪಿಸಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಅವನತಿಗೆ ವಿನಯ ಕುಮಾರ್ ಸೊರಕೆ ಮುಖ್ಯ ಕಾರಣ. ಇವರಿಂದಾಗಿಯೇ ಜಯಪ್ರಕಾಶ್ ಹೆಗ್ಡೆ, ಪ್ರಮೋದ್ ಮಧ್ವರಾಜ್ ಪಕ್ಷ ಬಿಟ್ಟು ಹೋದರು. ಹೊಸ ಮುಖಗಳಿಗೆ ಅವಕಾಶ ನೀಡಿರುವುದಾಗಿ ಹೇಳಿ ಹಲವು ಬಾರಿ ಶಾಸಕರು, ಸಂಸದರಾದ ಸೊರಕೆ, ಗೋಪಾಲ ಪೂಜಾರಿಗೆ ಯಾಕೆ ಟಿಕೆಟ್ ಕೊಟ್ಟಿದ್ದಾರೆ. ಭ್ರಷ್ಟರ ಚೇಲರಾಗಿ ಕೆಲಸ ಮಾಡುವ ಇವರ ಬದಲು, ಹೊಸಬರಿಗೆ ಟಿಕೆಟ್ ಕೊಡಬಹುದಿತ್ತಲ್ಲವೇ. ಜಿಲ್ಲೆಯಲ್ಲಿ ಕೆಲಸ ಮಾಡಿದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರಿಗೆ ಯಾವುದೇ ಸ್ಥಾನಮಾನ ನೀಡಿಲ್ಲ ಎಂದು ಅವರು ಟೀಕಿಸಿದರು.

ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಿದ ಮುನಿಯಾಲು ಉದಯ ಕುಮಾರ್ ಶೆಟ್ಟಿಗೆ ಯಾವ ನೆಲೆಯಲ್ಲಿ ಟಿಕೆಟ್ ನೀಡಿದ್ದಾರೆ. ಇವರು ಈವರೆಗೆ ಸುನೀಲ್ ಕುಮಾರ್ ವಿರುದ್ಧ ಒಂದೇ ಒಂದು ಹೇಳಿಕೆ ಕೊಟ್ಟಿಲ್ಲ. ಅದರ ಬದಲು ಶೇ.40 ಕಮಿಷನ್ ಬಗ್ಗೆ  ಸರಕಾರದ ಪರವಾಗಿ ಹೇಳಿಕೊಟ್ಟಿ ದ್ದಾರೆ. ಇವರು ಒಮ್ಮೆ ನಳಿನ್ ಕುಮಾರ್ ಕಟೀಲ್ ಜೊತೆ, ಇನ್ನೊಮ್ಮೆ ಪ್ರಭಾಕರ್ ಭಟ್, ಸುನೀಲ್ ಕುಮಾರ್ ಜೊತೆಗೆ ಹೋಗುತ್ತಾರೆ ಎಂದು ಅವರು ಆರೋಪಿಸಿದರು.

"ಆಕಾಂಕ್ಷಿಗಳಿಂದ ಅರ್ಜಿ ತೆಗೆದುಕೊಂಡಿದ್ದಾರೆ. ನಮ್ಮ ಹತ್ತಿರ ಕೆಲಸ ಮಾಡಿಸಿದ್ದಾರೆ. ನಾನು ಈ ಚುನಾವಣೆ ಸಿದ್ಧತೆಗಾಗಿ ಒಂದು ಕೋಟಿ ರೂ. ಖರ್ಚು ಮಾಡಿದ್ದೇನೆ. ಕೊನೆಗೆ ಇವರು ಆಕಾಂಕ್ಷಿಗಳನ್ನು ಮಂಗ ಮಾಡಿ ಬೇರೆಯವರಿಗೆ ಟಿಕೆಟ್ ಮಾರಾಟ ಮಾಡಿದ್ದಾರೆ. ಕಾಂಗ್ರೆಸ್ ಡಿ.ಕೆ.ಶಿವಕುಮಾರ್ ಅವರ ಅಪ್ಪನ ಆಸ್ತಿಯಲ್ಲ. ನನ್ನ ಉಚ್ಛಾಟನೆ ಮಾಡಿದರೂ ನನ್ನಲ್ಲಿರುವ ಕಾಂಗ್ರೆಸ್ ಸಿದ್ಧಾಂತವನ್ನು ಉಚ್ಛಾಟನೆ ಮಾಡಲು ಅವರಿಗೆ ಸಾಧ್ಯವಿಲ್ಲ".
-ಮಂಜುನಾಥ್ ಪೂಜಾರಿ,
ಅಧ್ಯಕ್ಷರು, ಹೆಬ್ರಿ ಬ್ಲಾಕ್ ಕಾಂಗ್ರೆಸ್

share
Next Story
X