ಮಂಗಳೂರು: ಅಧಿಕ ಬಾಡಿಗೆ ದರ ವಸೂಲಿ ಆರೋಪ; 16 ರಿಕ್ಷಾ ಚಾಲಕರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ನಿಗದಿತ ದರಕ್ಕಿಂತ ಅಧಿಕ ಬಾಡಿಗೆ ವಸೂಲಿ ಮಾಡಿದ ಆರೋಪದಲ್ಲಿ ನಗರದ 16 ಆಟೊ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಶನಿವಾರ ರಾತ್ರಿ ಪೊಲೀಸರು ಪ್ರಯಾಣಿಕರ ಸೋಗಿನಲ್ಲಿ ಆಟೊ ರಿಕ್ಷಾದಲ್ಲಿ ಪ್ರಯಾಣಿಸಿ ಪರಿಶೀಲಿಸಿದಾಗ ಅಧಿಕ ಬಾಡಿಗೆ ದರ ವಸೂಲಿ ಮಾಡುತ್ತಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
Next Story