ನಾಲ್ಕು ದಿನ ರಾಜ್ಯದ ವಿವಿಧೆಡೆ ಗುಡುಗು ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಕಡೆ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರದಲ್ಲಿ ಗುಡುಗು ಸಹಿತ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಗಾಳಿಯ ದಿಕ್ಕಿನಲ್ಲಿ ಬದಲಾವಣೆ(ಟ್ರಫ್) ಹಿನ್ನೆಲೆಯಲ್ಲಿ ರವಿವಾರ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಯ ವಿವಿಧ ಕಡೆ ಮಳೆಯಾದ ವರದಿಯಾಗಿದೆ.
Next Story