ಎಂ.ಪಿ. ಕುಮಾರಸ್ವಾಮಿಗೆ ಕೋರ್ಟ್‍ನಿಂದ ಜಾಮೀನು ರಹಿತ ವಾರಂಟ್

ಬೆಂಗಳೂರು: ಚೆಕ್‍ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ಇತ್ತೀಚೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಎಂ.ಪಿ.ಕುಮಾರಸ್ವಾಮಿ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು.
ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿತ್ತಾದರೂ ಕುಮಾರಸ್ವಾಮಿ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಕುಮಾರಸ್ವಾಮಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಎಸ್‍ಪಿಗೆ ಸೂಚನೆ ನೀಡಿದೆ.
ಇದನ್ನೂ ಓದಿ: ನಾನಿನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿಲ್ಲ: ಜಗದೀಶ್ ಶೆಟ್ಟರ್
Next Story