Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಿಂಗಾಯತ ಸಮುದಾಯಕ್ಕೆ ಆದ ಅಪಮಾನಕ್ಕೆ...

ಲಿಂಗಾಯತ ಸಮುದಾಯಕ್ಕೆ ಆದ ಅಪಮಾನಕ್ಕೆ ಬೇಸತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶೆಟ್ಟರ್: ಡಿ.ಕೆ. ಶಿವಕುಮಾರ್

17 April 2023 11:54 AM IST
share
ಲಿಂಗಾಯತ ಸಮುದಾಯಕ್ಕೆ ಆದ ಅಪಮಾನಕ್ಕೆ ಬೇಸತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶೆಟ್ಟರ್: ಡಿ.ಕೆ. ಶಿವಕುಮಾರ್

ಬೆಂಗಳೂರು: 'ಲಿಂಗಾಯತ ಸಮುದಾಯಕ್ಕೆ ಆಗುತ್ತಿರುವ ಅಪಮಾನ ಹಾಗೂ ತಮ್ಮನ್ನು ಬಿಜೆಪಿ ನಡೆಸಿಕೊಂಡ ರೀತಿಗೆ ಬೇಸತ್ತು ತಮ್ಮ ಸ್ವಾಭಿಮಾನ ರಕ್ಷಣೆಗಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ಲಿಂಗಾಯತ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಈ ದಿನ ರಾಜ್ಯಕ್ಕೆ ವಿಶೇಷವಾದ ದಿನ. ರಾಜ್ಯ ಹಾಗೂ ದೇಶದಲ್ಲಿ ಬದಲಾವಣೆ, ಅಭಿವೃದ್ಧಿ, ಪ್ರಗತಿ, ಒಗ್ಗಟ್ಟು ತರುವ ದಿನ. ಸರಳ, ಸಜ್ಜನಿಕೆಯ ನಾಯಕ, 6 ಬಾರಿ ಶಾಸಕರಾಗಿ ಸೋಲಿಲ್ಲದ ಸರದಾರ, ಸ್ವಾಭಿಮಾನಿ, ಸುದೀರ್ಘ ರಾಜಕಾರಣದ ಪಯಣದಲ್ಲಿ ಒಂದು ಸಣ್ಣ ಕಪ್ಪು ಚುಕ್ಕೆ ಇಲ್ಲದ ನಾಯಕ ಜಗದೀಶ್ ಶೆಟ್ಟರ್. ಅವರು ಇಂದು ಇಡೀ ರಾಷ್ಟ್ರಕ್ಕೆ ದೊಡ್ಡ ಸಂದೇಶ ನೀಡಲು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದರು. 

'ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಸ್ಪೀಕರ್ ಆಗಿ ಕೆಲಸ ಮಾಡಿರುವ ಜಗದೀಶ್ ಶೆಟ್ಟರ್ ಅವರು ಇಂದು ಪಕ್ಷಕ್ಕೆ ಸೇರುತ್ತಿದ್ದು, ಅವರಿಗೆ ಪಕ್ಷದ ಪರವಾಗಿ ತುಂಬು ಹೃದಯದ ಸ್ವಾಗತ ಕೋರುತ್ತೇನೆ. ಅವರ ಸೇರ್ಪಡೆ ರಾಜ್ಯ ಹಾಗೂ ದೇಶದಲ್ಲಿ ಬದಲಾವಣೆಯ ಮುನ್ಸೂಚನೆ ಸಿಕ್ಕಂತಾಗಿದೆ' ಎಂದು ತಿಳಿಸಿದರು. 

''ನನಗೆ ನಿನ್ನೆ ರಾತ್ರಿಯಿಂದ ಚಾಮರಾಜನಗರದಿಂದ ಬೆಳಗಾವಿವರೆಗೆ ಅನೇಕ ಬಿಜೆಪಿ ನಾಯಕರು ಹಾಗೂ ಶೆಟ್ಟರ್ ಅವರ ಅಭಿಮಾನಿಗಳು ಕರೆ ಮಾಡಿ ನಾವು ಕಾಂಗ್ರೆಸ್ ಪಕ್ಷ ಸೇರುತ್ತೇವೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಇಂದು ತುರ್ತಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗಿದ್ದು, ಜಿಲ್ಲಾ ಮಟ್ಟದಲ್ಲಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಅನುಮತಿ ನೀಡಲಾಗಿದೆ' ಎಂದು ಹೇಳಿದರು. 

ಲಿಂಗಾಯತ ಸಮುದಾಯಕ್ಕೆ ಬಿಜೆಪಿಯಂದ ಅಪಮಾನವಾಗುತ್ತಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಸೇರಿದಂತೆ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಸೇರಿದಂತೆ ಎಲ್ಲರಿಗೂ ಅಪಮಾನ ಮಾಡಲಾಗಿದೆ. ಲಿಂಗಾಯತ ಸಮುದಾಯದ ಆತ್ಮಗೌರಕ್ಕೆ ಧಕ್ಕೆಯಾಗಿದ್ದು, ಎಸ್ ಎಂ ಕೃಷ್ಣ ಅವರ ಕಾಲದಲ್ಲಿ ಲಿಂಗಾಯತ ಸಮುದಾಯ ಹೇಗೆ ಕಾಂಗ್ರೆಸ್ ಪರವಾಗಿ ನಿಂತಿತ್ತೋ ಅದೇ ರೀತಿ ಈ ಬಾರಿಯು ಲಿಂಗಾಯತ ಸಮುದಾಯ ಕಾಂಗ್ರೆಸ್ ಪರವಾಗಿ ನಿಲ್ಲಲಿದೆ’ ಎಂದು ತಿಳಿಸಿದರು.

ಶೆಟ್ಟರ್ ಅವರು ಅವರು ಯಾವ ಷರತ್ತು ಇಟ್ಟಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಜಗದೀಶ್ ಶೆಟ್ಟರ್ ಅವರು ಯಾವುದೇ ಷರತ್ತನ್ನು ಇಟ್ಟಿಲ್ಲ. ಅವರು ಬೇಷರತ್ತಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ನಾಯಕತ್ವ ಒಪ್ಪಿ ಪಕ್ಷ ಸೇರುತ್ತಿದ್ದಾರೆ. ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ದೇಶವನ್ನು ಒಗ್ಗೂಡಿಸಲು ಸಾಧ್ಯ’ ಎಂದು ತಿಳಿಸಿದರು.

ಪಕ್ಷಕ್ಕೆ ಇನ್ನು ಎಷ್ಟು ಜನ ನಾಯಕರು ಸೇರುತ್ತಾರೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ಪಕ್ಷ ಸೇರಲು ಅನೇಕ ನಾಯಕರು ಸೇರಲು ಮುಂದಾಗಿದ್ದಾರೆ. ಆದರೆ ನಾವು ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ಹೀಗಾಗಿ ಎಲ್ಲರನ್ನು ಸೇರಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಿಲ್ಲ’ ಎಂದು ತಿಳಿಸಿದರು.

share
Next Story
X