ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ: ಸಂಸದೆ ಸುಮಲತಾ

ಮಂಡ್ಯ: 'ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ' ಎಂದು ಹೇಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಮದ್ದೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮಂಡ್ಯ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದೆ. ಪಕ್ಷ ಸೂಚನೆ ನೀಡಿದರೆ ನನ್ನ ಸ್ಪರ್ಧೆ ಇರಲಿದೆ' ಎಂದು ಹೇಳಿದರು.
'ಮಂಡ್ಯ ಜಿಲ್ಲೆಯ ಜನರು ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಬರುತ್ತದೆ. ಮದ್ದೂರಿನಲ್ಲಿ ಅಂಬರೀಶ್ ಅಭಿಮಾನಿಗಳು ಹೆಚ್ಚು ಇದ್ದಾರೆ. ಅಂಬರೀಶ್ ಅಭಿಮಾನಿಗಳಿರುವುದರಿಂದ ಬಿಜೆಪಿಗೆ ಅನುಕೂಲ ಆಗುತ್ತೆ. ಮುಂದಿನ ದಿನಗಳಲ್ಲಿ ಬಿಜೆಪಿ ಪರ ಅಭಿಷೇಕ್ ಪ್ರಚಾರ ಮಾಡುತ್ತಾರೆ' ಎಂದು ಸ್ಪಷ್ಟಪಡಿಸಿದರು.
Next Story





