Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2024ರ ಲೋಕಸಭಾ ಚುನಾವಣೆಯಲ್ಲಿ...

2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ವಂಚಕ ಸುಕೇಶ್ ಚಂದ್ರಶೇಖರ್

17 April 2023 2:49 PM IST
share
2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ವಂಚಕ ಸುಕೇಶ್ ಚಂದ್ರಶೇಖರ್

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ, ಸುಲಿಗೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಂಚಕ ಸುಕೇಶ್ ಚಂದ್ರಶೇಖರ್, ತಾನು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾನೆ ಎಂದು theprint.in ವರದಿ ಮಾಡಿದೆ.

ಶನಿವಾರ ಗುರುಗ್ರಾಮ ಮೂಲದ ಕಾನೂನು ಸಂಸ್ಥೆಯೊಂದರ ಮೂಲಕ ಐದು ಪುಟಗಳ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ  ಸುಕೇಶ್, "ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ಭಾರತ ರಾಷ್ಟ್ರ ಸಮಿತಿ ನಡುವೆ ಸಂಬಂಧ ಇರುವಂತಿದೆ" ಎಂದು ಆರೋಪಿಸಿದ್ದಾನೆ.

ರಾಜಕಾರಣಿಗಳು ಹಾಗೂ ತಾರೆಯರೊಂದಿಗೆ ತನಗೆ ಸಂಬಂಧವಿದೆಯೆಂದು ಆಧಾರರಹಿತವಾಗಿ ಆತ ಪ್ರತಿಪಾದಿಸಿರುವುದು ಇದೇ ಮೊದಲೇನಲ್ಲ. ಈ ವಾರದ ಆರಂಭದಲ್ಲಿ ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿ ಸದ್ಯ ತಿಹಾರ್ ಜೈಲಿನಲ್ಲಿರುವ ಆಪ್‌ನ ಸತ್ಯೇಂದ್ರ ಜೈನ್, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಭಾರತ ರಾಷ್ಟ್ರ ಸಮಿತಿ ಪಕ್ಷದ ವಿಧಾನ ಪರಿಷತ್ ಸದಸ್ಯೆ ಕೆ.ಕವಿತಾ ಸೇರಿದಂತೆ ಹಲವಾರು ರಾಜಕಾರಣಿಗಳೊಂದಿಗೆ ತಾನು ನಡೆಸಿದ್ದೇನೆ ಎನ್ನಲಾದ ವಾಟ್ಸ್ ಆ್ಯಪ್ ಚಾಟ್ ಅನ್ನು ಆತ ಬಿಡುಗಡೆ ಮಾಡಿದ್ದ.

ಶನಿವಾರ ತಾನು ತನ್ನ ವಾಟ್ಸ್ ಆ್ಯಪ್ ಚಾಟ್ ಅನ್ನು ಸಾರ್ವಜನಿಕವಾಗಿ ಬಿಡುಗಡೆಗೊಳಿಸಲು ಇದ್ದ ಕಾರಣಗಳ ಕುರಿತು ತನ್ನನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸುತ್ತಿರುವ ಕಾನೂನು ಸಂಸ್ಥೆಯ ಮೂಲಕ ಸ್ಪಷ್ಟೀಕರಣ ಹೇಳಿಕೆ ಬಿಡುಗಡೆ ಮಾಡಿದ್ದ.

ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಕೆ.ಕವಿತಾ ಅವರನ್ನು ಉದ್ದೇಶಿಸಿ ಬರೆದಿರುವ ತನ್ನ ಪತ್ರದಲ್ಲಿ ತಾನು ಬಿಡುಗಡೆ ಮಾಡಿರುವ ವಾಟ್ಸ್ ಆ್ಯಪ್ ಚಾಟ್‌ಗಳು ರಾಜಕೀಯ ಪ್ರೇರಿತವೇ ಅಥವಾ ಹಣಕಾಸು ಲಾಭ ಪ್ರೇರಿತವೇ ಎಂಬ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಸುಕೇಶ್, ತನ್ನ ರಾಜಕೀಯ ಮಹತ್ವಾಕಾಂಕ್ಷೆ ಕುರಿತು ಮಾತನಾಡಿದ್ದಾನೆ ಎಂದು ಆ ಪತ್ರವನ್ನು ಲಭ್ಯವಾಗಿಸಿಕೊಂಡಿರುವ theprint.in ವರದಿ ಮಾಡಿದೆ.

ಆ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಸುಕೇಶ್, "ಇಲ್ಲ, ಮೇಲಿನ ಯಾರೂ ಅಲ್ಲ. ವಾಸ್ತವವೆಂದರೆ, ನಾನು ಮೊದಲೇ ಹೇಳಿದಂತೆ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲಿದ್ದೇನೆ. ಅದಕ್ಕೂ ಮುನ್ನ ನಾನು ಈ ಎಲ್ಲ ಕೊಳಕು ರಹಸ್ಯಗಳು ಹಾಗೂ ಈ ವ್ಯಕ್ತಿಗಳ ಹೊರೆಯನ್ನು ನನ್ನ ಮನಸ್ಸು ಮತ್ತು ಹೃದಯದಿಂದ ಕಿತ್ತೊಗೆಯಲು ಬಯಸಿದ್ದೇನೆ" ಎಂದು ಉತ್ತರಿಸಿದ್ದಾನೆ.

"ನಾನು ಜನರಿಗಾಗಿ ಕೆಲಸ ಮಾಡುವ ಮುನ್ನ ಅಥವಾ ಅವರ ಮತಗಳ ಮೂಲಕ ಚುನಾಯಿತನಾಗುವ ಮುನ್ನ ಇತರರು ಭಾವಿಸಿರುವಂತೆ ಅಥವಾ ಹೇಳುವಂತೆ ನಾನು ಯಾರಿಂದಲೂ ಯಾವುದೇ ದುರ್ಲಾಭದ ಬಯಕೆಯಿಲ್ಲದೆ, ಸ್ವ ಇಚ್ಛೆಯಿಂದ ಈ ಎಲ್ಲ ಸಂಗತಿಗಳನ್ನು ಬಹಿರಂಗಗೊಳಿಸುತ್ತಿದ್ದೇನೆ" ಎಂದೂ ಆತ ಉತ್ತರಿಸಿದ್ದಾನೆ.

share
Next Story
X