Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ...

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಬಿಜೆಪಿ, ಆರೆಸ್ಸೆಸ್ ದಾಳಿ: ರಾಹುಲ್ ಗಾಂಧಿ ವಾಗ್ದಾಳಿ

17 April 2023 4:10 PM IST
share
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಬಿಜೆಪಿ, ಆರೆಸ್ಸೆಸ್ ದಾಳಿ: ರಾಹುಲ್ ಗಾಂಧಿ ವಾಗ್ದಾಳಿ

ಬಿದರ್: 'ಬಿದರ್ ಬಸವಣ್ಣನವರ ಕರ್ಮಭೂಮಿ. ಬಸವಣ್ಣ ಶತಮಾನಗಳ ಹಿಂದೆಯೇ ಲೋಕತಂತ್ರದ ಬಗ್ಗೆ ಮಾತನಾಡಿದ್ದರು. ಇಂದು ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಇದ್ದರೆ ಅದಕ್ಕೆ ಅಡಿಪಾಯ ಹಾಕಿದವರು ಬಸವಣ್ಣನವರು. ಆದರೆ ದುರಂತ ಎಂದರೆ, ಇಂದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಬಿಜೆಪಿ ಹಾಗೂ ಆರೆಸ್ಸೆಸ್ ದಾಳಿ ಮಾಡುತ್ತಿದೆ. ಸಮಾಜದಲ್ಲಿ ದ್ವೇಷ ಬಿತ್ತಿ, ಹಿಂಸೆ ಹೆಚ್ಚಿಸುತ್ತಿದ್ದಾರೆ. ದೇಶದ ಸಂಪತ್ತನ್ನು ಕೆಲವರ ಕೈಗೆ ನೀಡುತ್ತಿದ್ದಾರೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 

ಭಾಲ್ಕಿಯಲ್ಲಿ ಕಾಂಗ್ರೆಸ್‌ ವತಿಯಿಂದ ಆಯೋಜಿಸಿದ್ದ ಜನ ಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, 'ಬಿಜೆಪಿ ಹಾಗೂ ಆರೆಸ್ಸೆಸ್  ಅವರ ವಿಚಾರಧಾರೆ ಬಸವಣ್ಣನವರ ವಿಚಾರಧಾರೆಗೆ ವಿರುದ್ಧವಾಗಿದೆ. ಈ ವಿರೋಧವಾಗಿ ಇವರು ಕೆಲಸ ಮಾಡುತ್ತಿದ್ದಾರೆ. ಕೆಲ ದಿನಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಕಾಂಗ್ರೆಸ್ 150 ಕ್ಷೇತ್ರಗಳ ಪ್ರಚಂಡ ಗೆಲುವು ಸಾಧಿಸಲಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಶೇ.40 ಕಮಿಷನ್ ಸರ್ಕಾರಕ್ಕೆ 40ಕ್ಕಿಂತ ಹೆಚ್ಚು ಕ್ಷೇತ್ರ ಸಿಗುವುದಿಲ್ಲ' ಎಂದು ಟೀಕಿಸಿದರು. 

'ಬಿಜೆಪಿ ಸರ್ಕಾರ ನುಡಿದಂತೆ ನಡೆದಿಲ್ಲ. ಅವರು ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕುತ್ತೇವೆ ಎಂದರು. ನಿಮಗೆ ಆ ಹಣ ಸಿಕ್ಕಿತೇ? ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು, ನಿಮಗೆ ಉದ್ಯೋಗ ಸಿಕ್ಕಿತೇ? ನೋಟು ರದ್ದು ಮಾಡಿ ಕಪ್ಪುಹಣ ನಿರ್ಮೂಲನೆ ಮಾಡುತ್ತೇವೆ ಎಂದರು. ಕಪ್ಪು ಹಣ ನಿರ್ಮೂಲನೆಯಾಯಿತೇ? ಬಿಜೆಪಿ ಕೇವಲ ಸುಳ್ಳಿನ ಆಶ್ವಾಸನೆ ನೀಡುತ್ತಾ ಬಂದಿದೆ' ಎಂದು ಕಿಡಿಕಾರಿದರು. 

'ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ನಾಲ್ಕು ಯೋಜನೆ ಜಾರಿ ಮಾಡುವ ಘೋಷಣೆ ಮಾಡಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಈ ಯೋಜನೆ ಜಾರಿ ಮಾಡಲಾಗುವುದು. ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೋಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ, ಗೃಹಜ್ಯೋತಿ ಮೂಲಕ ಪ್ರತಿ ತಿಂಗಳು ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಅನ್ನಭಾಗ್ಯ ಬಡ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಉಚಿತ ಹಾಗೂ ಯುವನಿಧಿ ಯೋಜನೆ ಮೂಲಕ ನಿರುದ್ಯೋಗ ಪದವೀಧರ ಯುವಕರಿಗೆ 3 ಸಾವಿರ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ನಿರುದ್ಯೋಗ ಭತ್ಯೆ ನೀಡಲಾಗುವುದು' ಎಂದು ಭರವಸೆ ನೀಡಿದರು. 

'ಮೋದಿ ಅವರು ಈ ದೇಶದಲ್ಲಿ ಕೇವಲ ಒಂದಿಬ್ಬರು ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷ ಈ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನ ಸಾಮಾನ್ಯರಿಗಾಗಿ ನೀಡಲಾಗುತ್ತಿವೆ. ಈ ನಾಲ್ಕು ಯೋಜನೆ ಕರ್ನಾಟಕ ರಾಜ್ಯದ ಜನರ ಬದುಕು ಬದಲಿಸಲಿದೆ' ಎಂದರು. 

share
Next Story
X