Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾನು ಬಿಜೆಪಿ ತೊರೆದು ಕಾಂಗ್ರೆಸ್...

ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು ಏಕೆ?: ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಶೆಟ್ಟರ್

17 April 2023 5:51 PM IST
share
ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು ಏಕೆ?: ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ನಿರಾಕರಿಸಿದ್ದಕ್ಕೆ ಪಕ್ಷದ ವಿರುದ್ಧ ಬಂಡಾಯ ಸಾರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. 

ಈ ಕುರಿತಾಗಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಶೆಟ್ಟರ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು ಏಕೆ?  ಬಿಜೆಪಿಯಲ್ಲಿ ತಮಗೆ ಅನ್ಯಾಯವಾಗಿದ್ದು ಯಾಕೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ವಿವರಿಸಿದ್ದಾರೆ. 

ಜಗದೀಶ್ ಶೆಟ್ಟರ್ ಅವರ ಪೋಸ್ಟ್ ಹೀಗಿದೆ...

''ಇಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಅನೇಕರಿಗೆ ಆಶ್ಚರ್ಯವಾಗಿರಬಹುದು. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾಗಿದ್ದವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಅನೇಕ ತಿಂಗಳಿಂದ ಹಿರಿಯ ನಾಯಕನಾಗಿ ನನಗೆ ಆಗಿರುವ ವೇದನೆ ಯಾರೂ ಅರ್ಥ ಮಾಡಿಕೊಂಡಿಲ್ಲ''

''ನಾನು ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಸಂಘಟನೆ ಮಾಡಿದ್ದೆ. ಬಿಜೆಪಿ ನನಗೆ ಕೊಟ್ಟ ಸ್ಥಾನಮಾನ, ಅಧಿಕಾರಕ್ಕೆ ಪ್ರತಿಯಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಹುಬ್ಬಳ್ಳಿಯಲ್ಲಿ 6 ಬಾರಿ ಶಾಸಕನಾಗಿ ಗೆದ್ದಿದ್ದೇನೆ. ಈಗ 7ನೇ ಬಾರಿ ಸ್ಪರ್ಧೆ ಮಾಡಲಿದ್ದೇನೆ. ಕಳೆದ 2 ವರ್ಷಗಳಿಂದ ಕ್ಷೇತ್ರದಲ್ಲಿ ಹೋರಾಡುತ್ತಿದ್ದೇನೆ. ನನಗೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನೀಡಿಲ್ಲ ಎಂಬುದು ನೋವಾಗಿದೆ. ನಾನು ಚುನಾವಣೆ ನಿಲ್ಲುವುದು ಬೇಡವಾಗಿದ್ದರೆ ಒಂದು ವಾರ ಮುಂಚಿತವಾಗಿ ಹೇಳಿ ಮಾತುಕತೆ ನಡೆಸಿದ್ದರೆ ನಾನು ಅದಕ್ಕೆ ಒಪ್ಪುತ್ತಿದ್ದೆ. ನಾನು ಎಂದಿಗೂ ಅಧಿಕಾರಕ್ಕಾಗಿ ರಾಜಕಾರಣ ಮಾಡಿಲ್ಲ. ನಾನು ಸಂಘ ಪರಿವಾರದಿಂದ ಬ೦ದಿರುವ ವ್ಯಕ್ತಿ. ನನ್ನನ್ನು ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಅರ್ಥವಾಗಿಲ್ಲ. ನನಗೆ ಜನರ ಆಶೀರ್ವಾದವಿದೆ ನಾನು ಹಠಕ್ಕೆ ಬಿದ್ದು ಗೆಲ್ಲುವ ಅಗತ್ಯವಿಲ್ಲ. ನಾಮಪತ್ರ ಸಲ್ಲಿಸುವ ಹಿಂದಿನ ದಿನ ನನಗೆ ಟಿಕೆಟ್ ಇಲ್ಲ ಎಂದು ಹೇಳಿ, ಸಣ್ಣ ಹುಡುಗನಂತೆ ನಡೆಸಿಕೊಂಡರೆ ನನಗೆ ಹೇಗೆ ಭಾಸವಾಗಬೇಕು. ಇದರಿಂದ ಬಹಳ ಬೇಸರವಾಯಿತು. ನನ್ನ ಅಭಿಮಾನಿಗಳು, ಹಿತೈಶಿಗಳು ಬಂದು ನನಗೆ ಆಗಿರುವ ಅಪಮಾನಕ್ಕೆ ಬೇಸರ ಮಾಡಿಕೊಂಡರು. ನನ್ನ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ಹಿತೈಷಿ, ಜನರ ಅಭಿಪ್ರಾಯ ಪಡೆದು ಈ ತೀರ್ಮಾನ ಮಾಡಿದ್ದೇನೆ''

''ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿ ಕಾಂಗ್ರೆಸ್ ಸೇರುವಂತೆ ಕರೆದರು. ನಾವು ಕಟ್ಟಿ ಬೆಳೆಸಿದ ಮನೆಯಿ೦ದ ನಮ್ಮನ್ನು ಹೊರ ದಬ್ಬಿದಾಗ ನಾನು ಸಹಜವಾಗಿ ಕಾಂಗ್ರೆಸ್ ಪಕ್ಷ ಸಿದ್ಧಾಂತ ನಂಬಿ ಬಹಳ ಸಂತೋಷದಿಂದ ಕಾಂಗ್ರೆಸ್ ಸೇರುತ್ತಿದ್ದೇನೆ. ನಾವು ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಕೆಲಸ ಮಾಡಿದ್ದೆವು. ಆದರೆ ಇಂದು ಕೆಲವು ವ್ಯಕ್ತಿಗಳಿಗಾಗಿ ಪಕ್ಷವನ್ನು ಕಟ್ಟಲಾಗುತ್ತಿದೆ. ಬಿಜೆಪಿ ಕಚೇರಿಯಲ್ಲಿ ಕೆಲವು ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆ. ಈ ವಿಚಾರ ಕೇಂದ್ರದ ನಾಯಕರ ಗಮನಕ್ಕೆ ಬಂದಿಲ್ಲ. ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಬೇರೆಯವರಿಗೆ ಅವಮಾನ ಮಾಡಲಾಗುತ್ತಿದೆ. ನನಗೆ ಅಪಮಾನ ಮಾಡಿದ ನಂತರ ನನಗೆ ಬೇರೆ ಹುದ್ದೆ ನೀಡುವುದಾಗಿ ಹೇಳಿದರು. ನನಗೆ ಅಧಿಕಾರ ಮುಖ್ಯವಾಗಿದ್ದರೆ, ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ಎಂದು ಸ್ವಯಂಕೃತ ಹೇಳಿಕೆ ನೀಡಿದ್ದೆ. ಅಧಿಕಾರ ಬೇಕಾಗಿದ್ದರೆ ಆಗಲೇ ಹಠಮಾಡಿ ಮಂತ್ರಿಗಿರಿ ಪಡೆಯುತ್ತಿದ್ದೆ. ಕೊನೆಯದಾಗಿ ನನಗೆ ಅಪಮಾನವಾಗಿದ್ದು, ಅದನ್ನು ಸರಿಪಡಿಸಲು ಶಾಸಕರಾಗಿ ಸ್ಪರ್ಧಿಸುತ್ತೇನೆ. ಆರು ತಿಂಗಳ ನಂತರ ಗೌರವಯುತವಾಗಿ ರಾಜೀನಾಮೆ ನೀಡುತ್ತೇನೆ ನಂತರ ನೀವು ಯಾರನ್ನು ಬೇಕಾದರೂ ಶಾಸಕರನ್ನಾಗಿ ಮಾಡಿಕೊಳ್ಳಿ ಎಂದು ಹೇಳಿದೆ ಆದರೂ ಅವರ ಒಪ್ಪಲಿಲ್ಲ''

''ನನ್ನನ್ನು ರಾಜಕೀಯವಾಗಿ ಗೌರವಯುತವಾಗಿ ಕಳುಹಿಸಿ ಎಂದು ಕೇಳಿದರೂ ಅದಕ್ಕೆ ಅವಕಾಶ ನೀಡಲಿಲ್ಲ. ನನಗೆ ಯಡಿಯೂರಪ್ಪನವರ ಮೇಲೆ ಬಹಳ ಗೌರವವಿದೆ. ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದಾಗ ರಾಜ್ಯದ ಎಲ್ಲಾ ಭಾಗದ ಲಿಂಗಾಯತ ಸಮುದಾಯದ ನಾಯಕರು ನನಗೆ ಕರೆ ಮಾಡಿ ನಿಮಗೆ ಬಿಜೆಪಿಯಲ್ಲಿ ಅನ್ಯಾಯವಾಗಿದ್ದು ಯಾಕೆ? ಎಂದು ಬೇಸರ ವ್ಯಕ್ತಪಡಿಸಿದರು. ಈ ಸಮುದಾಯ ಹಾಗೂ ಹುಬ್ಬಳ್ಳಿ ಧಾರವಾಡ ಭಾಗದ ಜನರ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿರುತ್ತೇನೆ. ರಾಜ್ಯದಲ್ಲಿ ಇಂದು ಬದಲಾವಣೆಯ ದಿನವಾಗಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ'' ಎಂದು ಶೆಟ್ಟರ್ ತಿಳಿಸಿದ್ದಾರೆ. 

ಕಾಂಗ್ರೆಸ್ ಸೇರ್ಪಡೆಯ ಕುರಿತು pic.twitter.com/vPETlZ87N3

— Jagadish Shettar (@JagadishShettar) April 17, 2023
share
Next Story
X