ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ; ಕಾರಿನ ಗಾಜು ಪುಡಿ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜಿಗೆ ಹಾನಿ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ಶಾಂತಗೊಳಿಸಿದರು.
Next Story