ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕೊಡ್ಗಿ ನಾಮಪತ್ರ ಸಲ್ಲಿಕೆ

ಕುಂದಾಪುರ, ಎ.17: ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಎ.17ರಂದು ನಾಮಪತ್ರ ಸಲ್ಲಿಸಿದರು.
ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ರಶ್ಮಿ ಎಸ್.ಆರ್. ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಈ ವೇಳೆ ಸಹಾಯಕ ಚುನಾವಣಾಧಿಕಾರಿ ಶೋಭಾಲಕ್ಷ್ಮೀ ಹಾಜರಿದ್ದರು.
ಈ ಸಂದರ್ಭದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪುರಸಭಾ ಮಾಜಿ ಅಧ್ಯಕ್ಷ ಮೋಹನದಾಸ ಶೆಣೈ, ಸದಾನಂದ ಬಳ್ಕೂರು, ಸಂಪತ್ ಕುಮಾರ್ ಶೆಟ್ಟಿ, ಸತೀಶ ಪೂಜಾರಿ ವಕ್ವಾಡಿ, ಪ್ರಭಾರಿ ಶ್ಯಾಮಲ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.
Next Story





