ವೃದ್ಧ ನಾಪತ್ತೆ

ಉಡುಪಿ, ಎ.17: ನಗರದ ಎಂ.ಜಿ.ಎಂ ಕಾಲೇಜು ಕ್ಯಾಂಟೀನ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಕೆ. ವೀರಭದ್ರ ಶೆಟ್ಟಿಗಾರ್ (61) ಎಂಬ ವೃದ್ಧರು ಎ.8ರಂದು ಪುಣ್ಯಕ್ಷೇತ್ರಗಳಿಗೆ ಹೋದವರು ವಾಪಾಸು ಬಾರದೇ ನಾಪತ್ತೆ ಯಾಗಿದ್ದಾರೆ.
5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾ ಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





