ಪಡುಬಿದ್ರೆ: ಬಿಜೆಪಿ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ; ಪ್ರಕರಣ ದಾಖಲು

ಪಡುಬಿದ್ರೆ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಮಾಧವ ಮಂಗಳ ಸಭಾಭವನದಲ್ಲಿ ರವಿವಾರ ಬಿಜೆಪಿ ವತಿ ಯಿಂದ ನಡೆದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವಿಭಾಗದಿಂದ ಬಂದ ದೂರಿನಂತೆ ಕಾಪು ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ ತಂಡದ ಅಧಿಕಾರಿ ಮುಸ್ತಾಫ್ ಈ ದಾಳಿ ನಡೆಸಿದ್ದಾರೆ.
ಸಭೆಯಲ್ಲಿ ಭಾಗವಹಿಸಿರುವ ವ್ಯಕ್ತಿಗಳಿಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಯಾವುದೇ ಅನುಮತಿ ಪಡೆಯದೆ ಸುಮಾರು 100 ಜನರಿಗೆ ಉಪಹಾರ ವಿತರಿಸಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದಾಗಿ ದೂರಲಾಗಿದೆ.
Next Story