ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಶಿವರಾಮ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಸುಳ್ಯ: ಎಡಮಂಗಲದ ಕೊಳಂಬೆ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಎಡಮಂಗಲ ಗ್ರಾಮದ ಕೊಳಂಬೆ ಶಿವರಾಮ ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದ ಸಂದರ್ಭ ಮನೆಯೊಳಗೆ ನುಗ್ಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶಿವರಾಮ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





