Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣಾ ಆಯೋಗದ ಮೇಲೆ ನಂಬಿಕೆ ಕುಗ್ಗಿದೆ:...

ಚುನಾವಣಾ ಆಯೋಗದ ಮೇಲೆ ನಂಬಿಕೆ ಕುಗ್ಗಿದೆ: ರಣದೀಪ್ ಸಿಂಗ್ ಸುರ್ಜೇವಾಲಾ ಬೇಸರ

17 April 2023 11:14 PM IST
share
ಚುನಾವಣಾ ಆಯೋಗದ ಮೇಲೆ ನಂಬಿಕೆ ಕುಗ್ಗಿದೆ: ರಣದೀಪ್ ಸಿಂಗ್ ಸುರ್ಜೇವಾಲಾ ಬೇಸರ

ಬೆಂಗಳೂರು, ಎ.17: ಸಿಎಂ ಬೊಮ್ಮಾಯಿ ಸರಕಾರ ಟೆಂಡರ್‍ಗಳಲ್ಲಿ ಶೇ.40ರಷ್ಟು ಕಮಿಷನ್ ಪಡೆಯಲು ಕಾನೂನು ಬಾಹಿರ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೆಲ್ಲವನ್ನು ನೋಡಿಯೂ ಮೌನ ವಹಿಸಿರುವ ಚುನಾವಣಾ ಆಯೋಗದ ಮೇಲೆ ನಂಬಿಕೆ ಕುಗ್ಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಬೇಸರ ವ್ಯಕ್ತಪಡಿಸಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆ ದಿನಾಂಕ ಘೋಷಿಸುವ ಮುನ್ನ ಅನೇಕ ಟೆಂಡರ್‍ಗಳನ್ನು ಸಮರ್ಪಕ ಪ್ರಕ್ರಿಯೆ ಮೂಲಕ ಹೊರಡಿಸಿಲ್ಲ. ಟೆಂಡರ್ ಅಂದಾಜು ಮೊತ್ತ, ಕಾಲಾವಧಿ ನಿಗದಿಯಾಗದೇ ಟೆಂಡರ್ ನೀಡಲಾಗಿದೆ. ಇಲಾಖೆವಾರು ಕಾಮಗಾರಿ ವೆಚ್ಚದ ಪರಿಶೀಲನೆ ಇಲ್ಲದೆ ಟೆಂಡರ್ ನೀಡಲಾಗಿದೆ. ಬೊಮ್ಮಾಯಿ ಸರಕಾರ ಕೇವಲ 40ರಷ್ಟು ಕಮಿಷನ್ ಪಡೆಯುವ ಏಕಮಾತ್ರ ಉದ್ದೇಶದಿಂದ ಈ ರೀತಿ ಅಕ್ರಮವಾಗಿ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಿದರು.

ಶಿರಾಡಿ ಘಾಟ್ ಟೆಂಡರ್ ಗೆ 1976 ಕೋಟಿ, ದೊಡ್ಡಬಳ್ಳಾಪುರದ ಕಾಮಗಾರಿಕೆ 1682 ಕೋಟಿ, ಆಂಧ್ರ ಪ್ರದೇಶ-ಕರ್ನಾಟಕ ಗಡಿ ಭಾಗದ ರಾಯಚೂರಿನಲ್ಲಿ 1633 ಕೋಟಿ, ಹಾಸನ ನಾಲ್ಕು ಪಥ ರಸ್ತೆಗೆ 1318 ಕೋಟಿ, ವಿವಿಧ ಬೈಪಾಸ್‍ಗಳ ಅಭಿವೃದ್ಧಿಗೆ 1167 ಕೋಟಿ ಹೀಗೆ ದೊಡ್ಡ ಪಟ್ಟಿಗಳಿವೆ. ಒಟ್ಟು 16,516 ಕೋಟಿ ಮೊತ್ತದ ಟೆಂಡರ್ ಗಳನ್ನು ತರಾತುರಿಯಲ್ಲಿ ನೀಡಲಾಗಿದೆ ಎಂದು ಸುರ್ಜೆವಾಲಾ ಮಾಹಿತಿ ನೀಡಿದರು.

ಈ ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗ ಸೋಮವಾರ ಸಂಜೆ ಒಂದು ಆದೇಶ ಹೊರಡಿಸಿದ್ದು, ಆಯೋಗವು ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಇನ್ನು ಈ ಟೆಂಡರ್‍ಗಳಿಗೆ ಚುನಾವಣೆ ಮುಗಿಯುವವರೆಗೂ ತಡೆ ನೀಡಬೇಕು. ಇನ್ನು ಈಗಾಗಲೇ ಕರೆಯಲಾಗಿರುವ ಟೆಂಡರ್ ಪ್ರಕ್ರಿಯೆ ಹಾಗೂ ಮುಂದಿನ ದಿನಗಳಲ್ಲಿ ಯಾವುದೇ ಹೊಸ ಟೆಂಡರ್ ಕರೆಯಬಾರದು ಎಂದು ಆಯೋಗ ತಿಳಿಸಿದೆ. ಅಲ್ಲದೆ ಕಾರ್ಯಾದೇಶ ನೀಡಬಾರದು ಎನ್ನಲಾಗಿದೆ ಎಂದು ಸುರ್ಜೆವಾಲಾ ತಿಳಿಸಿದರು.

ಆಯೋಗದ ಈ ಆದೇಶದಿಂದ ಬೊಮ್ಮಾಯಿ ಅವರ ಬಂಡವಾಳ ಬಯಲಾಗಿದೆ. ಅಕ್ರಮ ಟೆಂಡರ್ ಕರೆದಿರುವ ಎಲ್ಲಾ ಅಧಿಕಾರಿಗಳು, ಸಚಿವರ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಬಿಜೆಪಿ ಸರಕಾರ ಟೆಂಡರ್ ಮಾಫಿಯಾದಲ್ಲಿ 16 ಸಾವಿರ ಕೋಟಿ ರೂ.ಅಕ್ರಮ ಟೆಂಡರ್ ನೀಡಿದ್ದು, ಚುನಾವಣಾ ಆಯೋಗ ಅದಕ್ಕೆ ತಡೆ ನೀಡಿದೆ. ಇದು ಬೊಮ್ಮಾಯಿ ಸರಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಬೊಮ್ಮಾಯಿ ಅವರಿಗೆ ಕಿಂಚಿತ್ತಾದರೂ ನೈತಿಕತೆ ಇದ್ದರೆ ರಾಜೀನಾಮೆ ನೀಡಬೇಕು ಎಂದು ಸುರ್ಜೆವಾಲಾ ಆಗ್ರಹಿಸಿದರು.

share
Next Story
X