ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ: ವಿರಾಟ್ ಕೊಹ್ಲಿಗೆ ದಂಡ

ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಂಟು ರನ್ ನಿಂದ ಸೋತಿರುವ ಪಂದ್ಯದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಬ್ಯಾಟರ್ ವಿರಾಟ್ ಕೊಹ್ಲಿಗೆ ಅವರ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ.
ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ಕೊಹ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಐಪಿಎಲ್ ಹೇಳಿಕೆಯು ನೀತಿ ಸಂಹಿತೆ ಉಲ್ಲಂಘನೆಗೆ ಕಾರಣವಾದ ಘಟನೆಯ ಬಗ್ಗೆ ವಿವರ ನೀಡಿಲ್ಲ, ಸಿಎಸ್‌ಕೆ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ ಸೋಮವಾರ ವೇಯ್ನ್ ಪಾರ್ನೆಲ್ ಬೌಲಿಂಗ್ ನಲ್ಲಿ ಔಟಾದ ನಂತರ ಮಾಜಿ ಆರ್‌ಸಿಬಿ ನಾಯಕನ ಅತಿಯಾದ ಸಂಭ್ರಮಾಚರಣೆ ಇದಕ್ಕೆ ಕಾರಣವಾಗಿರಬಹುದು.
ಸಿಎಸ್‌ಕೆ 6 ವಿಕೆಟ್‌ಗೆ 226 ರನ್ ಗಳಿಸಿದ್ದು, ದುಬೆ 27 ಎಸೆತಗಳಲ್ಲಿ 52 ರನ್ ಗಳಿಸಿದ್ದರು, ಮಹೇಂದ್ರ ಸಿಂಗ್ ಧೋನಿ ತಂಡವು ಎಂಟು ರನ್‌ಗಳಿಂದ ಪಂದ್ಯವನ್ನು ಗೆದ್ದಿತು.
ಆರ್‌ಸಿಬಿ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ಪಂದ್ಯ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.







