ಕಾರ್ಕಳ: ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿ ನಾಮಪತ್ರ ಸಲ್ಲಿಕೆ

ಕಾರ್ಕಳ, ಎ.18: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉದಯ ಕುಮಾರ್ ಶೆಟ್ಟಿ ಮುನಿಯಾಲು ಇಂದು ನಾಮಪತ್ರ ಸಲ್ಲಿಸಿದರು.
ಕಾರ್ಕಳದ ತಾಲೂಕು ಕಚೇರಿಗೆ ಆಗಮಿಸಿದ ಅವರು ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು
ಈ ವೇಳೆ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ.ಆರ್.ರಾಜು, ಕೆಪಿಸಿಸಿ ಸದಸ್ಯರಾದ ಸುರೇಂದ್ರ ಶೆಟ್ಟಿ, ಕೆಪಿಸಿಸಿ ಸದಸ್ಯ ನೀರೇ ಕೃಷ್ಣ ಶೆಟ್ಟಿ, ಪ್ರಚಾರ ಸಮಿತಿಯ ಅಧ್ಯಕ್ಷ ಶುಭದ ರಾವ್, ಕಾಂಗ್ರೆಸ್ ಮುಖಂಡ ಅವೆಲಿನ್ ಲೂಯಿಸ್, ಅಲ್ಪಸಂಖ್ಯಾತ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಆರಿಫ್ ಕಲ್ಲೊಟ್ಟೆ, ಕೃಷ್ಣ ಯ್ಯ ಶೆಟ್ಟಿ, ಇಂದಿರಾ ಶೆಟ್ಟಿ, ನಮಿತಾ ಶೆಟ್ಟಿ, ಯೂತ್ ಕಾಂಗ್ರೆಸ್ ಯೋಗೇಶ್ ಇನ್ನಾ ಮೊದಲಾದವರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಉದಯ ಕುಮಾರ್ ಶೆಟ್ಟಿ, ಸತ್ಯ, ಧರ್ಮ ಮತ್ತು ಒಳ್ಳೆಯತನಕ್ಕಾಗಿ ತನ್ನನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
Next Story





