ಸುಡಾನ್‍ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತನ್ನಿ: ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಎ. 18: ‘ವಾರದಿಂದ ಸುಡಾನ್‍ನಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳ ಘರ್ಷಣೆಯಿಂದ ಅಶಾಂತಿ, ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಅಲ್ಲಿ ಸಿಲುಕಿರುವ ಕರ್ನಾಟಕ ರಾಜ್ಯದ ಹಕ್ಕಿ-ಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಬೇಕು’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.
ಮಂಗಳವಾರ ಟ್ವೀಟ್ ಮಾಡಿರುವ ಅವರು, ‘ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು. ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಬೇಕು. ಸುಮಾರು 60 ಭಾರತೀಯರು ಅಲ್ಲಿ ಸಂಕಷ್ಟದಲ್ಲಿದ್ದಾರೆಂಬ ವರದಿಗಳು ಬಂದಿವೆ. ಕೇಂದ್ರ ಸರಕಾರ ಕೂಡಲೇ ಅವರ ನೆರವಿಗೆ ದಾವಿಸಬೇಕು’ ಎಂದು ಮನವಿ ಮಾಡಿದ್ದಾರೆ.
It is also unfortunate to know that we have lost one Indian & 60 others in the ongoing civil war in Sudan.
— Siddaramaiah (@siddaramaiah) April 18, 2023
My deepest condolences to their families and pray for the peace in the region.
Next Story