ಹನೂರು: ಚುನಾವಣಾ ತರಬೇತಿಗೆ ಬಂದಿದ್ದ ಸಿಬ್ಬಂದಿ ಹೃದಯಾಘಾತದಿಂದ ಮೃತ್ಯು

ಹನೂರು: ಚುನಾವಣಾ ತರಬೇತಿಗೆ ಬಂದಿದ್ದ ವೇಳೆ ಸಿಬ್ಬಂದಿಯೊಬ್ಬರು ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಹನೂರಿನಲ್ಲಿ ವರದಿಯಾಗಿದೆ.
ಹನೂರು ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಗೆ ಆಗಮಿಸಿದ್ದ ಜಗದೀಶ್(40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹನೂರು ಪಟ್ಟಣದ ವಿವೇಕನಂದಾ ಶಾಲೆಯಲ್ಲಿ ಮಂಗಳವಾರ ಎಆರ್ಒ ಹಾಗೂ ಪಿಆರ್ಒಗಳಿಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆನ್ನಲಾಗಿದೆ.
ಕೂಡಲೇ ಅವರನ್ನು ಹೋಲಿಕ್ರಾಸ್ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಜಗದೀಶ್ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.
Next Story





