ಎ.20ರಂದು ಜೆ.ಆರ್.ಲೋಬೊ ನಾಮಪತ್ರ ಸಲ್ಲಿಕೆ

ಮಂಗಳೂರು, ಎ.18: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಎ.20ರಂದು ಮಧ್ಯಾಹ್ನ 12.15ಕ್ಕೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು.
ಅಂದು ಬೆಳಿಗ್ಗೆ 10ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಅಲ್ಲಿಂದ ಅವರು ಹಾಗೂ ಪಕ್ಷದ ನಾಯಕರು, ಪಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಪಾದಯಾತ್ರೆಯ ಮೂಲಕ ಮಹಾನಗರ ಪಾಲಿಕೆ ಕಚೇರಿಗೆ ಆಗಮಿಸಿ, ನಾಮಪತ್ರ ಸಲ್ಲಿಸುವರು ಎಂದು ಪ್ರಕಟಣೆ ತಿಳಿಸಿದರು.
Next Story





