ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಕಿಶನ್ ಹೆಗ್ಡೆ ತಕ್ಷಣ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ರಾಗಿ ಅಧಿಕಾರ ವಹಿಸಿಕೊಂಡು ಕೆಪಿಸಿಸಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು ಎಂದು ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
Next Story





