Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ....

ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ

18 April 2023 8:56 PM IST
share
ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ

ಸುಳ್ಯ:‌ ಕಳೆದ ಮೂರು ದಶಕಗಳಿಗೂ ಅಧಿಕ ಸಮಯದಿಂದ ಕಾಂಗ್ರೆಸ್ ಶಾಸಕರನ್ನು ಕಾಣದ ಸುಳ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿ ವಿಧಾನ ಸಭೆ ಪ್ರವೇಶಿಸಲಿದ್ದಾರೆ. ಈ ಬಾರಿ ಸುಳ್ಯದಲ್ಲಿ ನಡೆಯುವ ಚುನಾವಣೆ ಕಾರ್ಯಕರ್ತರ ಸ್ವಾಭಿಮಾನದ ಚುನಾವಣೆ ಎಂದು ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹ ಮೂರ್ತಿ ಹೇಳಿದರು.

ಅವರು ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ನಾಮ ಪತ್ರ ಸಲ್ಲಿಸಲಿರುವ ಹಿನ್ನಲೆಯಲ್ಲಿ ಆಯೋಜಿಸಿದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರದ ಬಿಜೆಪಿ ಸರಕಾರದ ಆಡಳಿತ ವೈಖರಿಯಿಂದ ಜನರು ಬೇಷತ್ತು ಹೋಗಿದ್ದಾರೆ. ಆರ್ಥಿಕ ದುಸ್ಥಿತಿಯಿಂದ ರೈತರ, ಜನ ಸಾಮಾನ್ಯರ ಜೀವನ ತತ್ತರಿಸಿದೆ ಎಂದು ಹೇಳಿದ ಅವರು ಬಿಜೆಪಿ ಸರಕಾರ ಶ್ರೀಮಂತರ ಪರ ಇದ್ದರ, ಕಾಂಗ್ರೆಸ್ ಬಡವರ, ಹಿಂದುಳಿದವರ ಪಕ್ಷವಾಗಿದೆ ಎಂದರು.

ಮಾಜಿ ಸಚಿವ ಯುಟಿ ಖಾದರ್ ಮಾತನಾಡಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹೆಚ್ಚಿನ ಸ್ಥಾನವನ್ನು ಪಡೆಯಬೇಕಾದರೆ ಸುಳ್ಯದ ಅಭ್ಯರ್ಥಿ ಜಿ ಕೃಷ್ಣಪ್ಪರವರ ಗೆಲುವು ಅತಿ ಅವಶ್ಯಕವಾಗಿದೆ. ಪಕ್ಷದ ಅಭ್ಯರ್ಥಿಗಳ ಬಗ್ಗೆ ಯಾವುದೇ ಗೊಂದಲಗಳಿದ್ದರೂ ಕೂಡ ಅವುಗಳನ್ನು ಸರಿಪಡಿಸಿಕೊಂಡು ಪಕ್ಷವನ್ನು ನೋಡಿ ರಾಜ್ಯದ ಅಭಿವೃದ್ಧಿಯನ್ನು ಬಯಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕಾಗಿದೆ. ಬಿಜೆಪಿಯ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದು ಈ ಬಾರಿ ಜನತೆ ಬದಲಾವಣೆಯನ್ನು ಬಯಸುತ್ತಿರುವುದು ಎಲ್ಲಾ ಕಡೆ ಕಂಡು ಬರುತ್ತಿದೆ.ಆದ್ದರಿಂದ ಸ್ವಾಸ್ಥ ಸಮಾಜ ನಿರ್ಮಾಣಕ್ಕಾಗಿ ರಾಜ್ಯದ ಸಂಪೂರ್ಣ ಅಭಿವೃದ್ಧಿಗಾಗಿ ಎಲ್ಲರೂ ಕೈಜೋಡಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ದುಡಿಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ, ಭರತ್ ಮುಂಡೋಡಿ, ಎನ್.ಜಯಪ್ರಕಾಶ್ ರೈ, ಎಂ.ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ಡಾ.ರಘು, ಪಿ.ಪಿ.ವರ್ಗೀಸ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಮತ್ತಿತರರು ಉಪಸ್ಥಿತರಿದ್ದರು. 

ಮೆರವಣಿಗೆಯಲ್ಲಿ ಆಗಮಿಸಿ ಬಳಿಕ ಪುರಭವನದ ಸಮೀಪ ಸಮಾವೇಶ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಲಾಯಿತು. ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿ ಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‍ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಜಿ.ಕೃಷ್ಣಪ್ಪ ಅವರು ಎರಡು ಪ್ರತಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್ , ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ಡಾ.ರಘು, ಪಿ.ಪಿ.ವರ್ಗೀಸ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ ಮತ್ತಿತರರು ಉಪಸ್ಥಿತರಿದ್ದರು.

share
Next Story
X