ಕಸಾಪ ವಿವಿಧ ದತ್ತಿ ಪ್ರಶಸ್ತಿ ಪ್ರಕಟ

ಬೆಂಗಳೂರು, ಎ.18: ಕಸಾಪ ವತಿಯಿಂದ ‘ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ’, ‘ಡಾ.ಎಚ್.ವಿಶ್ವನಾಥ್ ಮತ್ತು ಎಂ.ಎಸ್.ಇಂದಿರಾ ದತ್ತಿ’ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ.
2020ನೆ ಸಾಲಿನ ‘ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ’ ಪ್ರಶಸ್ತಿಗಾಗಿ ಶಿಕ್ಷಣ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿರುವ ‘ಬಸವರಾಜ ಪಾಟೀಲ ಸೇಡಂ’ ಅವರನ್ನು, 2021ನೆ ಸಾಲಿನ ಪ್ರಶಸ್ತಿಗಾಗಿ ಸಮಾಜ ಸೇವಾ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ‘ಸಂಧ್ಯಾ ದೀಪ’ ಆಯ್ಕೆಯಾಗಿದೆ. 2022ನೆ ಸಾಲಿನ ಪ್ರಶಸ್ತಿಗಾಗಿ ವಚನ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ‘ಧಾರವಾಡದ ಬಸವರಾಜ ಸಾದರ’ ಅವರನ್ನು ಆಯ್ಕೆ ಮಾಡಲಾಗಿದೆ.
ವಿಶೇಷ ದೃಷ್ಟಿಚೇತನ ಲೇಖಕರಿಗಾಗಿ ಮೀಸಲಿದ್ದ ‘ಡಾ.ಎಚ್.ವಿಶ್ವನಾಥ್ ಮತ್ತು ಎಂ.ಎಸ್.ಇಂದಿರಾ ದತ್ತಿ’ ಪ್ರಶಸ್ತಿಯನ್ನು 2022ನೆ ಸಾಲಿನ ಪ್ರಶಸ್ತಿಗೆ ‘ಬೆಳ್ಳಿ ಸೀಮೆಯ ರೈಲ್ವೆ ಸ್ಟೇಷನ್’ ಎನ್ನುವ ಕಾದಂಬರಿ ರಚಿಸಿದ ಲೇಖಕಿ ‘ಉಡುಪಿಯ ಸೌಮ್ಯ ಪುತ್ರನ್’ ಅವರು ಆಯ್ಕೆಯಾಗಿರುತ್ತಾರೆ ಎಂದು ಕಸಾಪ ಅಧಿಕೃತ ಪ್ರಕಟನೆ ತಿಳಿಸಿದೆ.





