ಧಾರವಾಡ: ಬಿಜೆಪಿ ಯುವ ಮೋರ್ಚಾ ಮುಖಂಡನ ಹತ್ಯೆ

ಧಾರವಾಡ: ಧಾರವಾಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ದುಷ್ಕರ್ಮಿಗಳ ತಂಡವೊಂದು ಹತ್ಯೆ ಮಾಡಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ವರದಿಯಾಗಿದೆ.
ಪ್ರವೀಣ್ ಕಮ್ಮಾರ ಎಂಬವರೇ ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ.
ಮೃತ ಪ್ರವೀಣ್ ಕೋಟೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು ಎಂದು ತಿಳಿದು ಬಂದಿದೆ.
ನಿನ್ನೆ (ಮಂಗಳವಾರ) ತಡರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಜಗಳ ನಡೆತ್ತು. ಈ ವೇಳೆ ದುಷ್ಕರ್ಮಿಗಳು ಪ್ರವೀಣ್ ಕಮ್ಮಾರನ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆನ್ನಲಾಗಿದೆ.
ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್ರನ್ನ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಹೇಳಲಾಗಿದೆ.
ಈ ಸಂಬಂಧ ಗರಗ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
Next Story