Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಡಾನ್‌ನಲ್ಲಿ ಸಿಲುಕಿದ ಭಾರತೀಯರು:...

ಸುಡಾನ್‌ನಲ್ಲಿ ಸಿಲುಕಿದ ಭಾರತೀಯರು: ಸ್ಥಳೀಯವಾಗಿ ನೆರವು ನೀಡುವ ಭರವಸೆ ನೀಡಿದ ಸೌದಿ, ಯುಎಇ

19 April 2023 2:16 PM IST
share
ಸುಡಾನ್‌ನಲ್ಲಿ ಸಿಲುಕಿದ ಭಾರತೀಯರು: ಸ್ಥಳೀಯವಾಗಿ ನೆರವು ನೀಡುವ ಭರವಸೆ ನೀಡಿದ ಸೌದಿ, ಯುಎಇ

ಹೊಸದಿಲ್ಲಿ: ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿನ ಭಾರತೀಯ ಪ್ರಜೆಗಳ ಸುರಕ್ಷತೆಯನ್ನು ಖಾತ್ರಿಗೊಳಿಸಲು ಭಾರತವು ಅಮೆರಿಕಾ, ಬ್ರಿಟನ್, ಸೌದಿ ಅರೇಬಿಯಾ, ಯುಎಇಯೊಂದಿಗೆ ಸಮಾಲೋಚನೆ ನಡೆಸುತ್ತಿದ್ದು, ಸೌದಿ ಅರೇಬಿಯಾ ಹಾಗೂ ಯುಎಇ ರಾಷ್ಟ್ರಗಳು ಸ್ಥಳೀಯ ನೆರವು ನೀಡುವ ಭರವಸೆ ನೀಡಿವೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಸುಡಾನ್‌ನಲ್ಲಿನ ಪರಿಸ್ಥಿತಿ ಪ್ರಕ್ಷುಬ್ಧವಾಗಿದ್ದು, ಈ ಹಂತದಲ್ಲಿ ಜನರನ್ನು ಸಾಗಿಸುವುದು ಅಪಾಯಕಾರಿಯಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ದೇಶದ ಸೇನಾ ಪಡೆ ಹಾಗೂ ಅರೆ ಸೇನಾ ಗುಂಪಿನ ನಡುವೆ ನಡೆಯುತ್ತಿರುವ ಭೀಕರ ಕಾಳಗಕ್ಕೆ ಕಳೆದ ಆರು ದಿನಗಳಿಂದ ಸುಡಾನ್ ಸಾಕ್ಷಿಯಾಗಿದ್ದು, ಈ ಕಾಳಗದಲ್ಲಿ ಸುಮಾರು 200 ಮಂದಿ ಮೃತಪಟ್ಟಿದ್ದಾರೆ.

ಅಮೆರಿಕಾವನ್ನು ಒಳಗೊಂಡಿರುವ ಜಿ-7 ಗುಂಪಿನ ವಿದೇಶಾಂಗ ಸಚಿವರು ಮಂಗಳವಾರ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಕಾಳಗದಲ್ಲಿ ತೊಡಗಿರುವ ಉಭಯ ಗುಂಪುಗಳನ್ನು ಆಗ್ರಹಿಸಿದೆ. ಈ ನಡುವೆ ಖಾರ್ಟೌಮ್‌ನಲ್ಲಿ ಭಾರಿ ಸ್ಫೋಟದ ಸದ್ದುಗಳು ಕೇಳಿ ಬರುತ್ತಿದ್ದು, ಯೋಧರು ಶಿರಸ್ತ್ರಾಣ ಹಾಗೂ ಸಮವಸ್ತ್ರಗಳನ್ನು ಧರಿಸಿ ಬೀದಿಗಳನ್ನು ಸುತ್ತುತ್ತಿದ್ದಾರೆ.

ಸೋಮವಾರ ಸುಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಹೊಸ ಮುನ್ನೆಚ್ಚರಿಕೆಯನ್ನು ಬಿಡುಗಡೆ ಮಾಡಿ, ಭಾರತೀಯರು ತಮ್ಮ ನಿವಾಸಗಳನ್ನು ತೊರೆಯಕೂಡದು ಹಾಗೂ ಸಂಯಮದಿಂದಿರಬೇಕು ಎಂದು ಆಗ್ರಹಿಸಿದೆ.

ಇದಕ್ಕೂ ಮುನ್ನ ಖಾರ್ಟೌಮ್‌ನಲ್ಲಿ ಗುಂಡೇಟು ತಗುಲಿ ಓರ್ವ ಭಾರತೀಯ ಪ್ರಜೆ ಮೃತಪಟ್ಟಿದ್ದಾರೆ ಎಂದು ರವಿವಾರ ಭಾರತೀಯ ರಾಯಭಾರ ಕಚೇರಿಯು ಪ್ರಕಟಿಸಿತ್ತು.

ಸದ್ಯ ಸುಡಾನ್‌ನಲ್ಲಿನ ಪರಿಸ್ಥಿತಿ ಕುರಿತು ಮಾಹಿತಿ ಹಾಗೂ ನೆರವು ಒದಗಿಸಲು ವಿದೇಶಾಂಗ ವ್ಯವಹಾರಗಳ ಇಲಾಖೆಯು ಈಗಾಗಲೇ 24x7 ಹೊತ್ತು ಕಾರ್ಯನಿರ್ವಹಿಸುವ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ.

ಇದನ್ನೂ ಓದಿ: ನೀವು ಬ್ಯುಸಿ ಇದ್ರೆ, ನಮ್ಮವರನ್ನು ಕರೆ ತರುವ ವ್ಯಕ್ತಿಯನ್ನು ಸಂಪರ್ಕಿಸಿಕೊಡಿ: ಜೈಶಂಕರ್ ಗೆ ಸಿದ್ದರಾಮಯ್ಯ ತಿರುಗೇಟು

share
Next Story
X