ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ಆಮ್ ಆದ್ಮಿ ಪಕ್ಷದಿಂದ ಸಂತೋಷ್ ಕಾಮತ್ ನಾಮಪತ್ರ ಸಲ್ಲಿಕೆ

ಮಂಗಳೂರು, ಎ.19: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕೆ. ಸಂತೋಷ್ ಕಾಮತ್ ವಿಧಾನಸಭಾ ಚುನಾವಣೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಕೆ. ಸಂತೋಷ್ ಕಾಮತ್ ಅವರು ಕ್ಷೇತ್ರದ ರಿಟರ್ನಿಂಗ್ ಆಫೀಸರ್ ಕೆಂಪೇಗೌಡರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ಮಂಗಳಾದೇವಿ ದೇವಳದಲ್ಲಿ ಕುಟುಂಬಿಕರು, ಪಕ್ಷದ ಮುಖಂಡರುಗಳು ಹಾಗೂ ಅಭಿಮಾನಿಗಳ ಜತೆಗೂಡಿ ಪೂಜೆ ಸಲ್ಲಿಸಿ ಬಳ್ಳಾಲ್ ಬಾಗ್‌ನಿಂದ ಮಹಾನಗರ ಪಾಲಿಕೆಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

Next Story





