ಬಂಗಾಳದ ಹೌರಾದಲ್ಲಿ ಭಾರೀ ಬೆಂಕಿ, 100 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ

ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಮಾರುಕಟ್ಟೆಯಲ್ಲಿ ಬುಧವಾರ ಮುಂಜಾನೆ ಭಾರೀ ಬೆಂಕಿ ಅನಾಹುತ ಸಂಭವಿಸಿದ್ದು, 100 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಲುಬೇರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಚೆಂಗೈಲ್‌ನಲ್ಲಿರುವ ಲುಡ್ಲೋ ಬಜಾರ್‌ನಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಇದು ವೇಗವಾಗಿ ಹರಡಿತು 100 ಕ್ಕೂ ಹೆಚ್ಚು ಅಂಗಡಿಗಳನ್ನು ನಾಶಪಡಿಸಿತು, ಅವುಗಳಲ್ಲಿ ಹಲವು ತಾತ್ಕಾಲಿಕ ರಚನೆಗಳಾಗಿವೆ. ಹತ್ತು ಅಗ್ನಿಶಾಮಕ ಯಂತ್ರಗಳು ನಾಲ್ಕು ಗಂಟೆಗಳ ಕಾಲ ಹೋರಾಟದ ನಂತರ ಬೆಂಕಿಯನ್ನು ಹತೋಟಿಗೆ ತಂದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಅಗ್ನಿ ಅವಘಡಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ತಿಳಿಸಿದ್ದಾರೆ.
ಬೆಂಕಿ ಅವಘಡದಿಂದ ಆಗಿರುವ ಹಾನಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈದ್ ಹಿನ್ನೆಲೆಯಲ್ಲಿ ಮಾರಾಟ ಹೆಚ್ಚಾಗುವ ನಿರೀಕ್ಷೆಯಲ್ಲಿ ಇತ್ತೀಚೆಗೆ ಸರಕುಗಳನ್ನು ದಾಸ್ತಾನು ಮಾಡಿದ್ದು, ಬೆಂಕಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸರಕು ಹಾನಿಯಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.





