ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ: ಜೆಪಿ ನಡ್ಡಾ, ನಟ ಸುದೀಪ್ ಸಾಥ್

ಶಿಗ್ಗಾಂವಿ: ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ನಟ ಕಿಚ್ಚ ಸುದೀಪ್ ಅವರು ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಶಿಗ್ಗಾಂವಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ನಟ ಕಿಚ್ಚ ಸುದೀಪ್, 'ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ' ಎಂದು ಮನವಿ ಮಾಡಿಕೊಂಡರು.
Next Story





