Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೇ 15ರವರೆಗೆ ನೀರು ಪೂರೈಕೆಗೆ ಸಮಸ್ಯೆ...

ಮೇ 15ರವರೆಗೆ ನೀರು ಪೂರೈಕೆಗೆ ಸಮಸ್ಯೆ ಇಲ್ಲ: ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್

19 April 2023 11:28 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೇ 15ರವರೆಗೆ ನೀರು ಪೂರೈಕೆಗೆ ಸಮಸ್ಯೆ ಇಲ್ಲ: ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್

ಉಡುಪಿ, ಎ.19: ಉಡುಪಿ ನಗರಕ್ಕೆ ನೀರು ಪೂರೈಕೆ ಮಾಡುವ ಬಜೆ ಡ್ಯಾಂನಲ್ಲಿ ಸದ್ಯ 4.36 ಮೀಟರ್ ನೀರಿನ ಸಂಗ್ರಹ ಇದೆ. ಈ ನೀರು ಮೇ 15ರವರೆಗೂ ಸಾಕಾಗಬಹುದು. ಆದುದರಿಂದ ಸದ್ಯ ನೀರಿನ ಯಾವುದೇ ಸಮಸ್ಯೆ ಇಲ್ಲ ಎಂದು ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಶಿರೂರು ಡ್ಯಾಮ್ ಮೇಲ್ಭಾಗ ದಲ್ಲಿ ನದಿಯ ಹೊಂಡದಲ್ಲಿರುವ ನೀರನ್ನು ಪಂಪಿಂಗ್ ಮೂಲಕ ಬಜೆಗೆ ಹಾಯಿಸುವ ಕಾರ್ಯ ನಡೆಯುತ್ತಿದೆ. ಅಲ್ಲದೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಎರಡು ಬಾರಿ ಟೆಂಡರ್ ಕರೆದಿದರೂ ಯಾರಿಂದಲೂ ಸ್ಪಂದನೆ ದೊರೆತಿಲ್ಲ. ಮೇ ತಿಂಗಳಲ್ಲಿ ಮಳೆ ಬಂದರೆ ಯಾವುದೇ ಸಮಸ್ಯೆೆಯಾಗುವುದಿಲ್ಲ. ನೀರು ಪೂರೈಕೆಯ ಪಂಪ್‌ಸೆಟ್‌ಗಳ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ ಎಂದರು.

ನಗರಸಭೆಯಿಂದ ನೀರಿನ ಬಿಲ್ ಆನ್‌ಲೈನ್ ಮೂಲಕ ತೆಗೆದುಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ. ಎರಡು ಹೊಸ ಬೋರ್‌ವೇಲ್ ಕೂಡ ತೆಗೆಯಲಿ ದ್ದೇವೆ. ವಾರಾಹಿ ನೀರಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಇನ್ನೂ ಹಾಗೆಯೇ ಮುಂದುವರೆದಿದೆ. ಆದರೆ ಈ ಸಮಸ್ಯೆಗೂ ನಗರಸಭೆಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನಗರಸಭೆಯ ಅಧಿಕಾರ ವಹಿಸಿಕೊಂಡು ಎರಡುವರೆ ವರ್ಷ ಪೂರ್ಣ ಗೊಳ್ಳುತ್ತಿದ್ದು, ಈ ಅವಧಿಯಲ್ಲಿ ಸುಮಾರು 40 ಕೋಟಿ ರೂ.ಗಳ ಕಾಮಗಾರಿ ನಡೆಸಲಾಗಿದೆ. 48 ಲಕ್ಷ ರೂ. ವೆಚ್ಚದಲ್ಲಿ ತೋಡುಗಳ ಹೂಳೆತ್ತುವ ಕಾರ್ಯ ಮಾಡಲಾಗುತ್ತಿದೆ. ಶಿವಳ್ಳಿಯಲ್ಲಿ ವಸತಿ ಸಮುಚ್ಛಯ ನಿರ್ಮಾಣ,  ಮಣಿಪಾಲದಲ್ಲಿ ವಾಣಿಜ್ಯ ಸಂಕೀರ್ಣ ಒಳಗೊಂಡ ವಸತಿ ಸಮುಚ್ಛಯ, ಪರ್ಕಳ ಮಾರುಕಟ್ಟೆ ನಿರ್ಮಾಣ ಮಾಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಸದಸ್ಯರಾದ ಗಿರೀಶ್ ಅಂಚನ್, ಟಿ.ಜಿ.ಹೆಗ್ಡೆ, ಅಶೋಕ್ ನಾಯಕ್ ಉಪಸ್ಥಿತರಿದ್ದರು.

ಶಾಸಕರಿಂದ ನೀರಿನ ಮಟ್ಟ ಪರಿಶೀಲನೆ

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಅದಕ್ಕೆ ಹೊಂದಿಕೊಂಡಿರುವ ಗ್ರಾಮ ಪಂಚಾಯತ್‌ಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ಬಜೆ ಡ್ಯಾಮ್ ಹಾಗೂ ಶಿರೂರು, ಪುತ್ತಿಗೆ ಭಾಗಗಳಿಗೆ ಶಾಸಕ ಕೆ.ರಘುಪತಿ ಭಟ್ ಇಂದು ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದರು.

ನಗರ ಸಭೆ ಅಧ್ಯಕ್ಷರು, ಸದಸ್ಯರುಗಳೊಂದಿಗೆ ಡ್ಯಾಮ್‌ನ ನೀರಿನ ಮಟ್ಟ ವೀಕ್ಷಿಸಿ ಚರ್ಚಿಸಿದ ಶಾಸಕ ರಘುಪತಿ ಭಟ್ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ನಗರ ಸಭಾ ಸದಸ್ಯರಾದ ಗಿರೀಶ್ ಅಂಚನ್, ಸಂತೋಷ್ ಜತ್ತನ್, ಅಶೋಕ್ ನಾಯ್ಕ್ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X