ಐಎಂಜೆ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ

ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಕಾಮರ್ಸ್ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕವನ್ನು ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಅಧ್ಯಕ್ಷ ಜಯಕರ್ ಶೆಟ್ಟಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪ್ರತಿಯೊಂದು ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳು ಪ್ರಾರಂಭ ಗೊಳ್ಳಬೇಕು. ಮಾನವೀಯತೆಯ ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತಹದ್ದು, ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಯಾರು ಕಷ್ಟದಲ್ಲಿ ಇರುತ್ತಾರೆಯೋ ಅಂತವರಿಗೆ ಸಹಾಯ ಮಾಡುವುದು ರೆಡ್ ಕ್ರಾಸ್ ಸಂಸ್ಥೆಯ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಕುಂದಾಪುರ ಯುವ ರೆಡ್‌ಕ್ರಾಸ್ ಸಂಯೋಜಕ ಸತ್ಯನಾರಾಯಣ್ ಪುರಾಣಿಕ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ದರು. ರೆಡ್‌ಕ್ರಾಸ್ ತರಬೇತು ದಾರ ಡಾ.ಸೋನಿ ಡಿಕೋಸ್ಟಾ ಪ್ರಥಮ ಚಿಕಿತ್ಸೆಯ ತರಬೇತಿ ಹಾಗೂ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು. ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಡಾ.ಪ್ರತಿಭಾ ಎಂ.ಪಟೇಲ್ ವಹಿಸಿದ್ದರು.
ಕುಂದಾಪುರ ರೆಡ್‌ಕ್ರಾಸ್ ಘಟಕ ಖಜಾಂಚಿ ಶಿವರಾಮ್ ಶೆಟ್ಟಿ, ಬೋಧಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿ ದ್ದರು. ಕಾಲೇಜು ಯುವರೆಡ್ ಕ್ರಾಸ್ ಘಟಕದ ಸಂಯೋಜಕಿ ಪ್ರೊ.ಶಬೀನಾ ಎಚ್. ಸ್ವಾಗತಿಸಿದರು. ಬಿಸಿಎ ವಿದ್ಯಾರ್ಥಿನಿ ನೇತ್ರಾವತಿ ಕಾರ್ಯಕ್ರಮ ನಿರ್ವಹಿಸಿದರು. ಪ್ರತಿಭಾ ವಂದಿಸಿದರು.