ರೈಲಿನಲ್ಲಿ ಮದ್ಯ ಸಾಗಾಟ: ಆರೋಪಿ ಪರಾರಿ
ಬೈಂದೂರು : ರೈಲಿನಲ್ಲಿ ಗೋವಾದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಬೈಂದೂರು ಪೊಲೀಸರು ಎ.18ರಂದು ರಾತ್ರಿ ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದು, ಈ ವೇಳೆ ಆರೋಪಿ ತಪ್ಪಿಸಿಕೊಂಡು ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.
ಗೋವಾ ಕಡೆಯಿಂದ ಕೇರಳಕ್ಕೆ ಹೋಗುವ ರೈಲಿನಲ್ಲಿ ಓರ್ವ ವ್ಯಕ್ತಿ ಬ್ಯಾಗಿನಲ್ಲಿ ಮದ್ಯ ಸಾಗಾಟ ಮಾಡುತ್ತಿರುವುದು ಕಂಡುಬಂದಿದ್ದು, ಈ ವೇಳೆ ಪೊಲೀಸರು ಆತನನ್ನು ತಪಾಸಣೆ ಮಾಡಲು ಮುಂದಾದಾಗ ಆತ ಬ್ಯಾಗ್ನ್ನು ಎಸೆದು ಓಡಿ ಪರಾರಿಯಾಗಿದ್ದಾನೆ. ಬ್ಯಾಗಿನಲ್ಲಿದ್ದ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story