Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣೆ ಮುಗಿಯುವವರೆಗೂ ಪ್ರಧಾನಿ ಮೋದಿ...

ಚುನಾವಣೆ ಮುಗಿಯುವವರೆಗೂ ಪ್ರಧಾನಿ ಮೋದಿ ರಾಜ್ಯದಲ್ಲೇ ನೆಲೆಸಲಿ: ಡಿ.ಕೆ.ಶಿವಕುಮಾರ್ ಆಹ್ವಾನ

19 April 2023 7:28 PM IST
share
ಚುನಾವಣೆ ಮುಗಿಯುವವರೆಗೂ ಪ್ರಧಾನಿ ಮೋದಿ ರಾಜ್ಯದಲ್ಲೇ ನೆಲೆಸಲಿ: ಡಿ.ಕೆ.ಶಿವಕುಮಾರ್ ಆಹ್ವಾನ

ಬೆಂಗಳೂರು, ಎ. 19: ‘ರಾಜ್ಯ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಪ್ರಧಾನಿ ಮೋದಿ ಅವರು ಇಲ್ಲೇ ಬಂದು ಇರಲಿ. ಇಲ್ಲಿನ ಹವಾಮಾನ, ಆತಿಥ್ಯ, ಸಂಸ್ಕೃತಿ ಎಲ್ಲವೂ ಉತ್ತಮವಾಗಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ಬುಧವಾರ ನಗರದಲ್ಲಿ ಪಕ್ಷದಿಂದ ವಿಧಾನಸಭಾ ಕ್ಷೇತ್ರಗಳ ವೀಕ್ಷಕರ ಸಭೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ತಾನು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಮೋದಿ ಅವರು ತಮ್ಮ ಪಕ್ಷದ ನಾಯಕರುಗಳನ್ನೇ ರಕ್ಷಣೆ ಮಾಡಿಕೊಳ್ಳಲಿಲ್ಲ. ಕರ್ನಾಟಕದಲ್ಲಿ ಅವರ ಮ್ಯಾಜಿಕ್ ನಡೆಯುವುದಿಲ್ಲ’ ಎಂದು ತಿರುಗೇಟು ನೀಡಿದರು.

‘ನಾವು ನಮ್ಮ ಪಕ್ಷವನ್ನು ಗೆಲ್ಲಿಸಿಕೊಳ್ಳಲು ಬೇಕಾದ ರಣತಂತ್ರಗಳನ್ನು ರೂಪಿಸಿಕೊಳ್ಳುತ್ತಿದ್ದೇವೆ. ಏನು ಮಾಡುತ್ತೇವೆಂದು ಹೇಳುವುದಿಲ್ಲ. ಆದರೆ, ರಾಜ್ಯದ ಜನರಿಗೆ ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ. ನಾವು ಕೊಟ್ಟಿರುವ ಗ್ಯಾರಂಟಿ ಯೋಜನೆಗಳು ನಮ್ಮ ಸರಕಾರ ಬಂದ ತಕ್ಷಣವೇ ಜಾರಿಯಾಗಬೇಕು. ಪ್ರತಿ ಮನೆಯೊಡತಿಗೆ 2 ಸಾವಿರ ರೂ., ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ, ಪ್ರತಿಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ ಮೂಲಕ ಪ್ರತಿಬಡ ವ್ಯಕ್ತಿಗೆ 10ಕೆ.ಜಿ ಅಕ್ಕಿ ತಲುಪಬೇಕು. ಇದರ ಜತೆಗೆ ಉತ್ತಮ ಆಡಳಿತ ನೀಡಬೇಕು. ಇದಕ್ಕಾಗಿ ಮತದಾರರನ್ನು ಯಾವ ರೀತಿ ಮನವೊಲಿಸಬೇಕು ಎಂದು ಯೋಜನೆ ರೂಪಿಸುತ್ತಿದ್ದೇವೆ ಎಂದು ಹೇಳಿದರು.

‘ಡಬಲ್ ಇಂಜಿನ್ ಸರಕಾರ ಕರ್ನಾಟಕ ರಾಜ್ಯದಲ್ಲಿ ವಿಫಲವಾಗಿವೆ. ಇಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಬಿಜೆಪಿ ಸರಕಾರಗಳಿಂದ ಸಾಧ್ಯವಾಗಿಲ್ಲ. ಮೋದಿ, ಅಮಿತ್ ಶಾ ಅವರಾಗಲಿ ರಾಜ್ಯಕ್ಕೆ ಬಂದು ಆಡಳಿತ ನಡೆಸುವುದಿಲ್ಲ. ರಾಜ್ಯದ ಜನ ವಿದ್ಯಾವಂತರು, ಪ್ರಗತಿಶೀಲರು. ರಾಜ್ಯ ಈ ಹಿಂದೆ ಹೊಂದಿದ್ದ ಘನತೆಯನ್ನು ನಾವು ಮತ್ತೆ ಪುನರ್ ಸ್ಥಾಪಿಸಬೇಕಿದೆ. ರಾಜ್ಯವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಬೇಕು. ರಾಜ್ಯವನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರನ್ನು ಕಾಪಾಡಬೇಕು. ಹೀಗಾಗಿ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೆಲ್ಲಾ ಪಕ್ಷ ಸೇರುತ್ತಾರೋ ಎಲ್ಲರನ್ನು ಸ್ವಾಗತಿಸುತ್ತೇವೆ’ ಎಂದು ತಿಳಿಸಿದರು.

ಕನಕಪುರವನ್ನು ಬಿಜೆಪಿ ಕ್ಷೇತ್ರವನ್ನಾಗಿ ಮಾಡುತ್ತೇವೆ ಎಂಬ ಆರ್.ಅಶೋಕ್ ಅವರಿಗೆ ನಾನು ಶುಭಾಷಯ ಕೋರುತ್ತೇನೆ. ಕನಕಪುರ ಕ್ಷೇತ್ರದಲ್ಲಿ ನಾನು ಕಾಂಗ್ರೆಸ್ ಅಭ್ಯರ್ಥಿ ಎನ್ನುವುದಕ್ಕಿಂತ, ಕ್ಷೇತ್ರದ ಪ್ರತಿ ಮನೆಯ ಮತದಾರ ಅಲ್ಲಿ ಅಭ್ಯರ್ಥಿಯಾಗಿದ್ದಾರೆ. ಅವರೇ ಈ ಚುನಾವಣೆಯನ್ನು ನಡೆಸಲಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್ ನುಡಿದರು.

share
Next Story
X