ವಿಧಾನಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧ

ಉಡುಪಿ, ಎ.19: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ದಂತೆ ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮೇ 8 ರಂದು ಸಂಜೆ 5 ಗಂಟೆಯಿಂದ ಮೇ 10ರ ಮಧ್ಯರಾತ್ರಿ 12 ರವರೆಗೆ ಹಾಗೂ ಮೇ 12ರಂದು ಮಧ್ಯರಾತ್ರಿ 12 ಗಂಟೆಯಿಂದ ಮೇ 13ರ ಮಧ್ಯರಾತ್ರಿ 12ರವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಡಿಪೋ ಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿಸಲಾಗಿದೆ.
ಅಲ್ಲದೇ ಹೋಟೆಲ್, ಕ್ಲಬ್ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
Next Story





