ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ 6 ವರ್ಷಗಳ ಅವಧಿಗೆ ಬಿಜೆಪಿಯಿಂದ ಉಚ್ಛಾಟನೆ

ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಬಳಿಕ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಆರು ವರ್ಷಗಳ ಅವಧಿಗೆ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ಮಾಡಾಳ್ ಮಲ್ಲಿಕಾರ್ಜುನ ಈಗಾಗಲೇ ಸ್ವಾಭಿಮಾನಿ ಹೆಸರಿನಲ್ಲಿ ಸಭೆ ನಡೆಸಿದ್ದು ಚನ್ನಗಿರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದಾರೆ.

Next Story





