ಮೋದಿ ಉಪನಾಮೆ ಹೇಳಿಕೆ: ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ಸೂರತ್ ಕೋರ್ಟ್ ನಕಾರ

ಸೂರತ್: ಮೋದಿ ಉಪನಾಮೆ ಹೇಳಿಕೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಧಿಸಿದ್ದ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿಯನ್ನು ಸೂರತ್‌ನ ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿದೆ.
2019 ರಲ್ಲಿ ಕೋಲಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಗಾಂಧಿ ಅವರು "ಎಲ್ಲಾ ಕಳ್ಳರಿಗೂ ಮೋದಿ ಉಪನಾಮ ಯಾಕೆ ಇದೆ" ಎಂದು ಕೇಳಿದ್ದಕ್ಕಾಗಿ ಮಾರ್ಚ್ 23 ರಂದು ಸೂರತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿತ್ತು. ಅದರ ಬೆನ್ನಲ್ಲೇ ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ಅನರ್ಹಗೊಂಡಿತ್ತು.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಬಿನ್ ಮೊಗೇರ ಅವರು ರಾಹುಲ್ ಗೆ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದು, ಪರಿಣಾಮ ಗಾಂಧಿಯವರು ಲೋಕಸಭೆಯಿಂದ ಅನರ್ಹರಾಗಿಯೇ ಉಳಿಯಲಿದ್ದಾರೆ.
Next Story





