ಬಂಟ್ವಾಳ: ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ, ಎ.20: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಗುರುವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.
ಇಂದು 12.35ಕ್ಕೆ ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಭಾರೀ ಸಂಖ್ಯೆಯ ಕಾರ್ಯಕರ್ತರ ಕರತಾಡನದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ಬಂಟ್ವಾಳ ಕೆಳಗಿನ ಪೇಟೆ ಜುಮಾ ಮಸೀದಿ ಬಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಚುನಾವಣಾ ಕಚೇರಿಯ ಸಮೀಪದಲ್ಲಿರುವ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನೇರವಾಗಿ ನಾಮಪತ್ರ ಸಲ್ಲಿಕೆಗೆ ತೆರಳಿದರು.
ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಶಾಸಕ ರೋಝಿ ಜಾನ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಸುಳ್ಯ ಅಭ್ಯರ್ಥಿ ಕೃಷ್ಣಪ್ಪ ಜಿ., ಪಕ್ಷ ಪ್ರಮುಖರಾದ ಎಂ.ಕೆ.ಎಂ.ಅಶ್ರಫ್, ಶೀಬಾ ರಾಮಚಂದ್ರನ್, ಜೋಕಿಂ ಡಿಸೋಜ, ಧನಂಜಯ ಅಡ್ಪಂಗಾಯ, ವೆಂಕಪ್ಪ ಗೌಡ, ನಝೀರ್ ಬಜಾರ್, ಕೌಶಲ್ ಶೆಟ್ಟಿ, ರಾಕೇಶ್ ಮಲ್ಲಿ, ಕೃಪಾ ಅಮರ್ ಆಳ್ವ, ಪ್ರಸಾದ್ ಪಾಣಾಜೆ, ಲುಕ್ಮಾನ್ ಬಂಟ್ವಾಳ, ಫಾರೂಕ್ ಬಯಬೆ, ಉಸ್ಮಾನ್ ಕರೋಪಾಡಿ, ಬೇಬಿ ಕುಂದರ್, ಸುದೀಪ್ ಶೆಟ್ಟಿ, ಪಿಯೂಸ್ ಎಲ್. ರೊಡ್ರಿಗಸ್, ಬಿ.ಎಚ್.ಖಾದರ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್.ಮುಹಮ್ಮದ್, ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ, ಜಯಂತಿ ಪೂಜಾರಿ, ಮುಹಮ್ಮದ್ ಶರೀಫ್, ಜನಾರ್ದನ ಚೆಂಡ್ತಿಮಾರ್, ಸುಭಾಶ್ಚಂದ್ರ ಶೆಟ್ಟಿ, ಉಮೇಶ್ ಸಪಲ್ಯ, ಸಂಜೀವ ಪೂಜಾರಿ, ನಾರಾಯಣ ನಾಯ್ಕ್, ವಾಸು ಪೂಜಾರಿ, ಸಿದ್ದೀಕ್ ಬೊಗೋಡಿ, ಸಿದ್ದೀಕ್ ಸರವು, ನ್ಯಾಯವಾದಿಗಳಾದ ಚಂದ್ರಶೇಖರ ಪೂಜಾರಿ, ಚಿದಾನಂದ ಕಡೇಶ್ವಾಲ್ಯ, ಸುರೇಶ್ ಕುಲಾಲ್ ನಾವೂರು, ಉಮಾಕರ ಮತ್ತಿತರರು ಭಾಗವಹಿಸಿದ್ದರು.