ಅಚ್ಚರಿಯ ಬೆಳವಣಿಗೆ: ಕನಕಪುರದಿಂದ ನಾಮಪತ್ರ ಸಲ್ಲಿಸಿದ ಡಿ.ಕೆ ಸುರೇಶ್

ರಾಮನಗರ: ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಕನಕಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಪದ್ಮನಾಭನಗರ ಕ್ಷೇತ್ರದಲ್ಲಿ ಆರ್.ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ನಡುವೆ ಈ ಬೆಳವಣಿಗೆ ನಡೆದಿದೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದರು. ಡಿ.ಕೆ ಶಿವಕುಮಾರ್ ಅವರ ನಾಮಪತ್ರ ಅನರ್ಹವಾಗಬುದು ಎಂಬ ಬೀತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿ.ಕೆ ಸುರೇಶ್ ಅವರು, 'ಯಾವುದಾದರೊಂದು ಕ್ಷೇತ್ರದಿಂದ ಅರ್ಜಿ ಹಾಕುತ್ತೇನೆ. ಎಲ್ಲಿಂದ ಅಂತ ಗೊತ್ತಿಲ್ಲ. 2 ಗಂಟೆ ವರೆಗೆ ಕಾದು ನೋಡಿ' ಎಂದಷ್ಟೇ ಹೇಳಿದ್ದರು.
Next Story





