ಕಡೂರು ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ದಾಖಲಾಗಿವೆ.
ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತಾ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ನೀಡಿದ್ದಾರೆ. 2014 ರಿಂದ 2023ರ ವರೆಗೆ ರಾಜ್ಯ ಹೊರರಾಜ್ಯಗಳಲ್ಲಿ 41 ಚೆಕ್ಬೌನ್ಸ್ ಪ್ರಕರಣಗಳು ದಾಖಲಾಗಿವೆ.
ವೈಎಸ್‌ವಿ ದತ್ತ ಅವರ ಬಳಿ 2022-23 ರಲ್ಲಿ 8 ಲಕ್ಷದ 15 ಸಾವಿರ ಆದಾಯ ಹೊಂದಿದ್ದಾರೆ. 17.89 ಲಕ್ಷ ಮೌಲ್ಯದ ಚರಾಸ್ತಿ, 2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಒಟ್ಟು 93.19 ಲಕ್ಷ ಸಾಲ ಪಡೆದುಕೊಂಡಿದ್ದಾರೆ.
Next Story





