ನಾಳೆ (ಎ.21) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು, ಎ.20: ಎಪ್ರಿಲ್ 21ರ (ಶುಕ್ರವಾರ) ಬೆಳಗ್ಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ.
ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು www.karresults.nic.in ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ ಹೊರಡಿಸಿದೆ
ನಾಳೆ ಬೆಳಗ್ಗೆ 10 ಗಂಟೆಗೆ ಪರೀಕ್ಷಾ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗುತ್ತದೆ. ನಂತರ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್‌ನಲ್ಲಿ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯ ನಂತರ ಪರಿಶೀಲನೆ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





