Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೀನುಗಾರಿಕಾ ಬಂದರು ಕಾಮಗಾರಿ ವಿಳಂಬ...

ಮೀನುಗಾರಿಕಾ ಬಂದರು ಕಾಮಗಾರಿ ವಿಳಂಬ ಆರೋಪ: ಮರವಂತೆ ಮೀನುಗಾರರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ

20 April 2023 12:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೀನುಗಾರಿಕಾ ಬಂದರು ಕಾಮಗಾರಿ ವಿಳಂಬ ಆರೋಪ: ಮರವಂತೆ ಮೀನುಗಾರರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ

ಬೈಂದೂರು, ಎ.20: ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆ ಮೀನುಗಾರಿಕಾ ಬಂದರಿನ ಎರಡನೇ ಹಂತದ 85 ಕೋಟಿ ರೂ. ವೆಚ್ಚದ ಕಾಮಗಾರಿ ಘೋಷಣೆಯಾಗಿ ಟೆಂಡರ್ ಆದರೂ ಈವರೆಗೆ ಕಾಮಗಾರಿ ನಡೆದಿಲ್ಲ. ಈ ಬಗ್ಗೆ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆ ಗಮನ ಸೆಳೆದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಆದುದರಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಮೀನುಗಾರಿಕಾ ಸೇವಾ ಸಮಿತಿ ಅಧ್ಯಕ್ಷ ವಾಸುದೇವ ಖಾರ್ವಿ ಎಚ್ಚರಿಕೆ ನೀಡಿದ್ದಾರೆ.

ಮರವಂತೆ ಮೀನುಗಾರಿಕಾ ಹೊರ ಬಂದರು ಸಮೀಪದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಸುಮಾರು 2-3 ಸಾವಿರ ಕುಟುಂಬಗಳ 10 ಸಾವಿರ ಮಂದಿ ಮೀನುಗಾರಿಕೆ ನಂಬಿಕೊಂಡಿದ್ದೇವೆ. ಮರವಂತೆ ಹೊರಬಂದರು ಮೊದಲ ಹಂತದ ಕಾಮಗಾರಿ ಅಪೂರ್ಣಗೊಂಡಿದ್ದು, ಅದನ್ನು ಪೂರ್ಣಗೊಳಿಸುವ ಸಲುವಾಗಿ ಸರಕಾರ 85 ಕೋಟಿ ರೂ. ನೀಡಿ ಮಂಜೂರಾತಿಗೊಳಿಸಿತ್ತು. ಅದರಂತೆ ಮೀನುಗಾರಿಕಾ ಇಲಾಖೆಯು 2020ರ ಎ.24ರಂದು ಟೆಂಡರ್ ಕರೆದು ಆ ಬಳಿಕ ಕಳೆದ ನವೆಂಬರ್‌ನಲ್ಲಿ ಮುಖ್ಯ ಮಂತ್ರಿಗಳು ಬಂದು ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿದ್ದರು. ಆದರೆ ಈವರೆಗೂ ಕಾಮಗಾರಿ ಮಾತ್ರ ಆರಂಭಗೊಂಡಿಲ್ಲ ಎಂದರು.

ನಮ್ಮ ಮನವಿಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳನ್ನು ಆರಿಸಿ ಕಳುಹಿಸುವುದರಲ್ಲಿ ಅರ್ಥವಿಲ್ಲ. ಹೀಗಾಗಿ ಮರವಂತೆಯ ಎಲ್ಲಾ ಮೀನುಗಾರರು ಈ ಬಾರಿಯ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದೇವೆ ಎಂದು ಅವರು ತಿಳಿಸಿದರು.

ಮೀನುಗಾರ ಮುಖಂಡ ಮೋಹನ್ ಖಾರ್ವಿ ಮಾತನಾಡಿ, ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ಕೇವಲ ಭರವಸೆ ನೀಡುತ್ತದೆ. ಆದರೆ ಮೀನುಗಾರರ ಪರವಾಗಿ ಯಾರೂ ಕೆಲಸ ಮಾಡುತ್ತಿಲ್ಲ. ಬಿಜೆಪಿಗೆ ದೊಡ್ಡ ಶಕ್ತಿ ಕೊಡುವ ನಮ್ಮ ಸಮುದಾಯವನ್ನು ಕಡೆಗಣಿಸುತ್ತಿದೆ. ಜೂನ್ ತಿಂಗಳಲ್ಲಿ ತೂಫಾನ್ ಪ್ರಾರಂಭ ವಾಗುತ್ತದೆ. ತೂಫಾನ್ ಪ್ರಾರಂಭಗೊಂಡರೆ ಈಗಿರುವ ಬಂದರು ಕೊಚ್ಚಿ ಹೋಗಲಿದೆ. ಚುನಾವಣಾ ಹಿತದೃಷ್ಠಿಯಿಂದ ನಾವು ಮತದಾನ ಬಹಿಷ್ಕರಿಸುವುದು ತಪ್ಪು. ಆದರೆ ನಮ್ಮ ಬದುಕಿನ ಪ್ರಶ್ನೆ ಬಂದಾಗ ಚುನಾವಣೆ ಬಹಿಷ್ಕರಿಸದೇ ಬೇರೆ ದಾರಿ ನಮಗಿಲ್ಲ ಎಂದು ಹೇಳಿದರು.

ತೌಕ್ತೆ ಚಂಡಮಾರುತ ಬಂದು ಕಡಲ್ಕೊರೆತವಾದಾಗ ಸ್ವತಃ ರಾಜ್ಯದ ಮುಖ್ಯಮಂತ್ರಿಗಳು, ಗ್ರಹ ಸಚಿವರು ಈ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ನಮ್ಮ ಮನವಿಯನ್ನು ಸ್ವೀಕರಿಸಿದ್ದಾರೆ. ಇದು ಬಿಜೆಪಿಯ ಭದ್ರಕೋಟೆ. ಏನೇ ಆದರೂ ಬಿಜೆಪಿಗೆ ಮತ ಹಾಕುತ್ತೇವೆ ಎಂದು ನಂಬಿಕೊಂಡಿದ್ದಾರೆ. 2013ರಿಂದ ನಿರಂತರವಾಗಿ ಬಂದರು ಕುಸಿಯುತ್ತಿದೆ. ಇದು ಹೀಗೆಯೇ ಮುಂದುವರಿದರೆ ಇನ್ನು ಬಂದರು ಕಾಣಲಿಕ್ಕೆ ಸಿಗೋದಿಲ್ಲ. ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟು ಕೊಂಡು ಕಾಮಗಾರಿ ಚಾಲನೆಗೆ ಮೀನಾಮೇಶ ಎಣಿಸುತ್ತಿದ್ದಾರೆ. ಮೀನುಗಾಗರರೇ 25-30 ಲಕ್ಷ ಹಣ ಹಾಕಿ ಬಂದರೊಳಗೆ ಕೆರೆ ನಿರ್ಮಾಣ ಮಾಡಿ ಕೊಳ್ಳುತ್ತೇವೆ. ಮಾಡಿಲ್ಲವೆಂದರೆ ಬೇರೆ ಬಂದರುಗಳಿಗೆ ಹೋಗುವ ಸ್ಥಿತಿ ಇದೆ ಎಂದರು.

ಸಮಿತಿಯ ಮಾಜಿ ಅಧ್ಯಕ್ಷ ಚಂದ್ರ ಖಾರ್ವಿ, ವೆಂಕಟರಮಣ ಖಾರ್ವಿ, ಸೋಮಯ್ಯ ಖಾರ್ವಿ, ಉಪಾಧ್ಯಕ್ಷ ಶೇಖರ್ ಖಾರ್ವಿ, ಮಾರ್ಕೆಟಿಂಗ್ ಸಮಿತಿ ಅಧ್ಯಕ್ಷ ಶಂಕರ್ ಖಾರ್ವಿ, ಶ್ರೀಧರ್ ಖಾರ್ವಿ ಪತ್ರಿಕಾಗೋಷ್ಠಿಯಲ್ಲಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X