ಉಡುಪಿ: ಚುನಾವಣಾ ವೀಕ್ಷಕರಿಂದ ಸಿದ್ಧತೆಗಳ ಪರಿಶೀಲನೆ

ಉಡುಪಿ, ಎ.20: ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳ ವೀಕ್ಷಕ ರಾದ ತುಕಾರಾಂ ಹರಿಬಾಹು ಮುಂಡೆ ಅವರು ಗುರುವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂಸಿಎಂಸಿ, ಸೋಯಲ್ ಮೀಡಿಯಾ ಸೆಂಟರ್, ಸೀಜಿಲ್ ಕಾರ್ಯ ನಿರ್ವಹಣೆ, ದೂರು ನಿರ್ವಹಣಾ ಕೊಠಡಿಗಳಿಗೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕಾರ್ಕಳ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಆಂಧ್ರ ವಂಶಿ, ಪೊಲೀಸ್ ವೀಕ್ಷಕಿ ಬಿನಿತಾ ಠಾಕೂರ್, ವೆಚ್ಚ ವೀಕ್ಷಕ ಅಂಕಿತ್ ಸೋಮನಿ, ಗೋರ್ಸೆ ಪ್ರಸಾದ್ ದತ್ತಾತ್ರೇಯ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಮತ್ತಿತರರು ಉಪಸ್ಥಿತರಿದ್ದರು.
Next Story





