Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಜನತೆಗೆ ಮೋದಿ ಆಶೀರ್ವಾದ...

ರಾಜ್ಯದ ಜನತೆಗೆ ಮೋದಿ ಆಶೀರ್ವಾದ ಹೇಳಿಕೆಗೆ ಆಕ್ರೋಶ: ನಡ್ಡಾ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

20 April 2023 9:43 PM IST
share
ರಾಜ್ಯದ ಜನತೆಗೆ ಮೋದಿ ಆಶೀರ್ವಾದ ಹೇಳಿಕೆಗೆ ಆಕ್ರೋಶ: ನಡ್ಡಾ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಬೆಂಗಳೂರು, ಎ.20: ‘ಕರ್ನಾಟಕದ ಜನತೆ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು, ಬಿಜೆಪಿಗೆ ಮತ ನೀಡಬೇಕು’ ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ‘ತೆರಿಗೆ ಹಂಚಿಕೆಯ ತಾರತಮ್ಯ ನೀತಿಯಲ್ಲಿ ಕರ್ನಾಟಕ ಅಂದಾಜು ಒಂದು ಲಕ್ಷ ಕೋಟಿ ರೂಪಾಯಿ ಕಳೆದುಕೊಂಡದ್ದು, ಕನ್ನಡಿಗರು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿ ತೆರಿಗೆಯಲ್ಲಿ ಹದಿನೈದು ಪೈಸೆ ಮಾತ್ರ ವಾಪಸು ನೀಡುವುದು, ಮೋದಿಯವರ ಆಶೀರ್ವಾದವೇ ಶಾಪವೇ? ಎಂದು ನಡ್ಡಾ ಅವರಿಗೆ ಪ್ರಶ್ನಿಸಿದ್ದಾರೆ.

ಕೇಂದ್ರ ಸರಕಾರದ ಅನುದಾನ ಕಡಿತದಿಂದಾಗಿ ರಾಜ್ಯ ಸರಕಾರ ಮಾಡಿಕೊಂಡ ಸಾಲ ರೂ.2.4.0 ಲಕ್ಷ ಕೋಟಿಗಳಿಂದ ರೂ.5.60 ಲಕ್ಷ ಕೋಟಿಗೆ ಏರಿಕೆಯಾಗಿದ್ದು, ಮತ್ತು ಪ್ರತಿಯೊಬ್ಬ ಕನ್ನಡಿಗನ ತಲೆಮೇಲೆ 86ಸಾವಿರ ರೂ.ಸಾಲದ ಹೊರೆ ಬಿದ್ದಿರುವುದು ಮೋದಿ ಆಶೀರ್ವಾದವೇ, ಶಾಪವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

2019ರಲ್ಲಿ ನೆರೆ ಹಾವಳಿ ನಷ್ಟಕ್ಕೆ 35ಸಾವಿರ ರೂ.ಕೋಟಿ ಪರಿಹಾರ ಕೇಳಿದ್ದರೂ, ಕೇವಲ 1,869 ಕೋಟಿ ರೂ.ಮಾತ್ರ ಕೇಂದ್ರ ಸರಕಾರ ಕೊಟ್ಟಿದ್ದು, 2020 ಮತ್ತು 2021ರಲ್ಲಿಯೂ ಇದೇ ಅನ್ಯಾಯ ಮುಂದುವರಿಸಿದ್ದು, ಕನ್ನಡಿಗರು ಕಟ್ಟಿರುವ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸಿಂಡಿಕೇಟ್ ಬ್ಯಾಂಕ್,  ಕಾರ್ಪೊರೇಷನ್ ಬ್ಯಾಂಕ್ ಮತ್ತು ವಿಜಯ ಬ್ಯಾಂಕ್ ಗಳನ್ನು ನುಂಗಿ ಹಾಕಿದ್ದು, ಕನ್ನಡಿಗರ ಹೆಮ್ಮೆಯ ‘ನಂದಿನಿ’ಯನ್ನು ಗುಜರಾತ್ ಮೂಲದ ‘ಅಮುಲ್’ ಆಪೋಶನ ತೆಗೆದುಕೊಳ್ಳಲು ಹೊರಟಿರುವುದು ಮೋದಿಯವರ ಆಶೀರ್ವಾದವೇ, ಶಾಪವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಐಬಿಪಿಎಸ್ ಮತ್ತು ಎಲ್‍ಐ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲಿಕ್ಕೆ ಅವಕಾಶ ನೀಡದೆ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿ ಕನ್ನಡಿಗ ಯುವಜನರ ಹೊಟ್ಟೆಗೆ ಹೊಡೆದದ್ದು, ಮತ್ತು ಮಹಾರಾಷ್ಟ್ರದ ಸರಕಾರ ನಮ್ಮ ರಾಜ್ಯದ 865 ಹಳ್ಳಿಗಳಲ್ಲಿ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲು ಹೊರಟಿರುವುದು ಆಶೀರ್ವಾದವೇ, ಶಾಪವೇ ಎಂದು ಪ್ರಶ್ನಿಸಿದ್ದಾರೆ.

ಮಹದಾಹಿ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಲು ವಿಳಂಬ ಮಾಡಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡಲು ವಿಫಲವಾಗಿದ್ದು, ಕೇಂದ್ರ ಸರಕಾರದ ನೆರವಿನ ಕೊರತೆಯಿಂದ ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಿರುವುದು ಆಶೀರ್ವಾದವೇ, ಶಾಪವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

share
Next Story
X